Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಲಾರಿಗೆ ಕಾರು ಡಿಕ್ಕಿ ; ಓರ್ವ ಸಾವು, ಮೂವರಿಗೆ ಗಾಯ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 19 : ತಾಲೂಕಿನ ಹೆಗ್ಗೆರೆ ಗೇಟ್ ಬಳಿ ಲಾರಿಗೆ ಹಿಂಬದಿಯಿಂದ‌ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಕಳೆದ ರಾತ್ರಿ 12 ಗಂಟೆ ಸಮಯದಲ್ಲಿ ನಡೆದಿದೆ.

ಚಳ್ಳಕೆರೆ-ಹಿರಿಯೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನ ಚಾಲಕ ಬೆಂಗಳೂರಿನ ಮೂಲದವರಾದ ಬಸವರಾಜ್ (46 ವರ್ಷ) ಸ್ಥಳದಲ್ಲೆ ಮೃತಪಟ್ಟಿದ್ದು, ಇದೇ ಕಾರಿನಲ್ಲಿದ್ದ ಶಿವಪ್ಪ (45 ವರ್ಷ)

ವಿರಭದ್ರಪ್ಪ (58 ವರ್ಷ) ದ್ರುವ (12 ವರ್ಷ) ‌ಗಾಯಗಳಾಗಿದ್ದು, ಅವರೆಲ್ಲರನ್ನೂ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಚಿತ್ರದುರ್ಗ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಶಿರುಗುಪ್ಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಕಾರು ಚಾಲಕನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂಬ ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಚಳ್ಳಕೆರೆ ಪಿಎಸ್ ಐ ಈರೇಶ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...