Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕಾರು ಡಿಕ್ಕಿ : ಒರ್ವ ಸಾವು, ಇಬ್ಬರಿಗೆ ಗಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 23 :ಹೆದ್ದಾರಿ ಸಮೀಪ ಇರುವ ಶೌಚಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಒರ್ವ ಸ್ಥಳದಲ್ಲೇ ಮೃತ ಪಟ್ಟು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಾಳಾಗಿರುವ ಘಟನೆ ಇಂದು ಬೆಳಿಗ್ಗೆ ಸುಮಾರು 3 ಗಂಟೆ ಸಮಯದಲ್ಲಿ ನಡೆದಿದೆ.

ಚಳ್ಳಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಈ ಅಪಘಾತ ಸಂಭವಿಸಿದ್ದು, ತಾಲ್ಲೂಕಿನ ಮನ್ನೆಕೊಟೆ ಗ್ರಾಮದ ಚಂದ್ರ ತನ್ನ ಸ್ನೇಹಿತರ ಜೊತೆಗೆ ಈಚರ್ ಲಾರಿಯಲ್ಲಿ ಬೆಂಗಳೂರಿಗೆ ಹೋಗಿ ವಾಪಸ್ ಬರುವಾಗ ಲಾರಿಯಿಂದ ಕೆಳಗೆ ಇಳಿದು ರಸ್ತೆ ಬದಿಯಲ್ಲಿದ್ದ ಸಾರ್ವಜನಿಕ ಶೌಚಾಲಯಕ್ಕೆ ಹೋಗಿ ವಾಪಸ್ ಬರುತ್ತಿರುವಾಗ ಚಿತ್ರದುರ್ಗದಿಂದ ಕೊಂಡ್ಲಹಳ್ಳಿ ಕಡೆ ಹೋರಟಿದ್ದ ಕಾರು ಚಂದ್ರುಗೆ ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಚಂದ್ರು ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವನಪ್ಪಿದರು. ಕಾರು ರಸ್ತೆಯ ಕಂಬಕ್ಕೆ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಕಾರಿನ ಚಾಲಕ ಕೊಂಡ್ಲಹಳ್ಳಿಯ ಶಿವು ಹಾಗೂ ಅಜ್ಜಂಪುರ ತಾ‌ಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ಚಂದನ್ ‌ಈ ಇಬ್ಬರಿಗೆ ಗಾಯಗಳಾಗಿದ್ದ ಇಬ್ಬರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...