ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 26 : ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರುಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದ ಇಬ್ಬರಿಗೆ ತೀವ್ರ ರೀತಿಯ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ ಹಿರೇಹಳ್ಳಿ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಇಂದು ಸಂಜೆ (ಫೆಬ್ರವರಿ26, ಗುರುವಾರ) 5 ಗಂಟೆ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೊಸಕೆರೆ ಗ್ರಾಮದ ಐವರು ಮಂತ್ರಾಲಯಕ್ಕೆ ಹೋಗಿ ವಾಪಸ್ ತೆರೆಯುತ್ತಿರುವ ವೇಳೆ ಈ ಅಪಘಾತ ಸಂಭವಿಸಿದೆ. ಮೃತರನ್ನು ನರಸಿಂಹನ ಮೂರ್ತಿ(38) ಗಂಗಾಧರ್ (35), ಲೋಹಿತ್(40) ಎಂದು ಗುರುತಿಸಲಾಗಿದೆ. ಸದಾಶಿವ (38) ಮತ್ತು ಶಿವ(48) ಗಾಯಗೊಂಡವರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲೆಯ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈ ಎಸ್ ಪಿ ಸತ್ಯನಾರಾಯಣರಾವ್ ಹಾಗೂ ತಳಕು ಪೋಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ತಳುಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



