ಸುದ್ದಿಒನ್, ಚಳ್ಳಕೆರೆ, ನವೆಂಬರ್. 14 : ನಗರ ಹೊರವಲಯ ಕರಿಕಲ್ ಬಳಿ ಬುಧವಾರ ರಾತ್ರಿ ಸ್ನೇಹಿತರ ಮಧ್ಯೆ ಜಗಳವಾಗಿದ್ದು, ಇಬ್ಬರು ಚಾಕು ಇರಿತಕ್ಕೆ ಒಳಗಾಗಿದ್ದಾರೆ.
ಸ್ನೇಹಿತರು ಹೊರವಲಯದಲ್ಲಿ ಗುಂಡು ಪಾರ್ಟಿ ನಡೆಸುತ್ತಿಸ್ದ ವೇಳೆ ಮಾತಿನ ಚಕಮಕಿ ಗಲಭೆಗೆ ತಿರುಗಿದ್ದು, ದುರ್ಘಟನೆ ಸಂಭವಿಸಿದೆ.
ಚಾಕು ಇರಿತಕ್ಕೆ ಗಂಭೀರವಾಗಿ ಗಾಯಗೊಂಡಿರುವ ಶ್ರೀನಿವಾಸ್ ಎಂಬಾತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಪರಿಸ್ಥಿತಿ ಗಂಭೀರವಾಗಿದೆ. ಇನ್ನೊಬ್ಬ ವೀರೇಶನನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನಬಂದಂತೆ ಚಾಕು ಇರಿದ ಜೆಡಿಎಸ್ ಮುಖಂಡರೊಬ್ವರ ಹತ್ತಿರದ ಸಂಬಂಧಿ ಚಕ್ರವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಟಿ.ಡಿ.ರಾಜಣ್ಣ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದು, ತನಿಖೆ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











