ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ನವೆಂಬರ್. 25 : ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಬರುತ್ತಿರುವ ವೇಳೆ ಕಾರೊಂದು ಪಲ್ಟಿಯಾಗಿ ಮಗು ಸಾವನಪ್ಪಿದ್ದು ಇಬ್ಬರಿಗೆ ಗಂಭಿರ ಗಾಯಗಳಾಗಿರುವ ಘಟನೆ ಇಂದು ರಾಷ್ಟೀಯ ಹೆದ್ದಾರಿ 150 ಎ ವೀರದೀಮ್ಮನಹಳ್ಳಿ ಸಮೀಪ ನಡೆದಿದೆ.
ಗೌರಿಬಿದನರಿನಿಂದ ರಾಂಪುರಕ್ಕೆ ವಿವಾಹ ಕಾರ್ಯಕ್ರಮಕ್ಕೆ ಬಂದು ಮದುವೆ ಮುಗಿಸಿ ವಾಪಸ್ ಹೋಗುವ ವೇಳೆ ವೀರದಿಮ್ಮನಹಳ್ಳಿ ಸಮೀಪ ಬೈಕ್ ಅಡ್ಡ ಬಂದಿದ್ದು, ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮೂರು ಪಲ್ಟಿ ಹೋಡೆದಿದೆ.
ಕಾರಿನಲ್ಲಿ ಇದ್ದ ಒಟ್ಟು ಐವರಲ್ಲಿ ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಕಾರಿನಲ್ಲಿದ್ದ ಗಿರೀಶ ಮತ್ತೊರ್ವನಿಗೆ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯವಾಗಿದೆ . ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












