ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ನಗರಸಭೆಗೆ ಸೇರಿದ 94 ಇಂದಿರಾ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಶನಿವಾರ ಬೆಳಗಿನ ಜಾವದಿಂದಲೇ ಆರಂಭವಾಗಿದೆ.

ನಗರಸಭೆ ವ್ಯಾಪ್ತಿಯ ಮಾದೇವಿ ರಸ್ತೆ ಹಾಗೂ ಬೆಂಗಳೂರು ರಸ್ತೆ ಹಾಗೂ ಪಾವಗಡ ರಸ್ತೆಯಲ್ಲಿ ಇರುವ ಈ ಮಳಿಗೆಗಳು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ, ಪೌರ ಆಯುಕ್ತೆ ಡಾ. ನಾಗವೇಣಿ ಅವರ ಸಮ್ಮುಖದಲ್ಲಿ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ತೆರವು ಕಾರ್ಯ ಮಾಡಲಾಗುತ್ತಿದೆ.
ಸುಮಾರು ಹಲವು ವರ್ಷಗಳಿಂದ ಕಡಿಮೆ ಬಾಡಿಗೆಯಲ್ಲಿ ನೀಡಲಾಗುತ್ತಿದ್ದ ಈ ಮಳಿಗೆಗಳಿಂದ ನಗರಸಭೆ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಕೆಲ ಬಾಡಿಗೆದಾರರು ಮಳಿಗೆಗಳನ್ನು ಇತರರಿಗೆ ಹೆಚ್ಚಿನ ಮೊತ್ತಕ್ಕೆ ಬಾಡಿಗೆಗೆ ನೀಡಿ ಲಾಭ ಪಡೆಯುತ್ತಿರುವ ಪ್ರಕರಣಗಳೂ ಪತ್ತೆಯಾಗಿವೆ. ಅಷ್ಟೇ ಅಲ್ಲದೆ 94 ಮಳಿಗೆಗೆಳಿ ಈಗಾಗಲೆ ಶಿಥಲಗೊಂಡಿದ್ದು ಅಪಾಯದ ಪರಿಸ್ಥಿತಿಯಲ್ಲಿವೆ.
ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಮೇರೆಗೆ ನಗರಸಭೆ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. 1970ರಲ್ಲಿ ನಿರ್ಮಾಣಗೊಂಡ ಈ ಮಳಿಗೆಗಳು ಹಳೆಯದಾಗಿ ಶಿಥಿಲಗೊಂಡಿರುವುದರಿಂದ, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದಲೂ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದೆಡೆ, ಮಳಿಗೆ ಬಾಡಿಗೆದಾರರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರೂ, ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ತೆರವು ಕಾರ್ಯ ಮುಂದುವರೆಸುತ್ತಿದ್ದಾರೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









