ಸುದ್ದಿಒನ್, ಚಳ್ಳಕೆರೆ, ಮಾರ್ಚ್. 22 : ತಾಲ್ಲೂಕಿನ ಮುಚ್ಚುಗುಂಟೆ ಗ್ರಾಮದ ನಿವಾಸಿಯಾದ ಗಾದ್ರಿಪಾಪಯ್ಯನವರ ರಾಜೇಶ್ ಕುಟುಂಬಕ್ಕೆ ಸೇರಿದ ಗರ್ಭ ಧರಿಸಿದ ಹಸಿವಿನ ಹೊಟ್ಟೆಯಲ್ಲಿ ಹಸುಗೂಸಿನ ಕರು ಹೊಟ್ಟೆಯಲ್ಲಿ ಸತ್ತುಹೋಗಿತ್ತು, ಈ ಸುದ್ದಿಯನ್ನು ತಿಳಿದ ಚಿತ್ರದುರ್ಗದ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮುಚ್ಚುಕುಂಟೆ ಇಂದು ಗ್ರಾಮದಲ್ಲಿ ಪ್ರಸವ ವೇದನೆಯಿಂದ ಬಳಲುತ್ತಿದ್ದ ಅಮೃಮಹಲ್ ಹಸುವನ್ನು ಸಿಸೇರಿಯನ್ ಮಾಡಿ ವಿಕೃತ ರೂಪದಲ್ಲಿದ್ದ ಕರುವನ್ನು ಶಸ್ತ್ರ ಚಿಕಿತ್ಸಕರಾದ ಡಾ.ದರ್ಶನ್ ಮತ್ತು ಡಾ.ರಕ್ಷಿತ್ ತಂಡವು ಯಶಸ್ವಿಯಾಗಿ ತೆಗೆದು ಹಸುವಿನ ಜೀವ ರಕ್ಷಣೆ ಮಾಡಿದ್ದಾರೆ.
ಇವರ ಕಾರ್ಯವು ಅತ್ಯಂತ ಶ್ಲಾಘನೀಯ. ವೈದ್ಯೋ ನಾರಾಯಣೋ ಹರಿ ಎಂದರೆ ಈ ವೈದ್ಯರೇ ದೇವರು ಎಂದರೆ ತಪ್ಪಾಗಲಾರದು, ಗ್ರಾಮದ ಜನತೆಯಲ್ಲಿ ಮಂದಹಾಸ ಮೂಡಿಸಿದ್ದಾರೆ ಈ ಸಂದರ್ಭದಲ್ಲಿ ಡಾ.ಟಿ. ಕೃಷ್ಣಪ್ಪ, ನಿವೃತ್ತ ಜಂಟಿ ನಿರ್ದೇಶಕರು, ಪಶು ವೈದ್ಯಕೀಯ ಇಲಾಖೆ, ಬೆಂಗಳೂರು ಹಾಗೂ ರಾಮ ಜೋಗಿಹಳ್ಳಿಯ ಪಶು ವೈದ್ಯ ಇಲಾಖೆಯ ಇನ್ಸ್ಪೆಕ್ಟರ್ ಜಯನಾಯ್ಕ ಇನ್ನಿತರೆ ಗ್ರಾಮಸ್ತರು ಹಾಜರಿದ್ದರು..
ವರದಿ : ಟಿ.ಶಿವಮೂರ್ತಿ ಕೋಡಿಹಳ್ಳಿ, ಚಿತ್ರದುರ್ಗ,
ಸುದ್ದಿಒನ್ ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 23 : ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಐತಿಹಾಸಿಕ ಸ್ಥಳಗಳಾದ ಅಶೋಕನ ಶಿಲಾ ಶಾಸನ, ಜಟಿಂಗರಾಮೇಶ್ವರ, ಶ್ರೀ ನುಂಕಮಲೆಸಿದ್ದೇಶ್ವರ…
ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಗರಣ ದೊಡ್ಡ ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದ್ದರು ಅವರದ್ದೇ ಪಕ್ಷದ ಸಚಿವರ ಮೇಲೆ ಹನಿಟ್ರ್ಯಾಪ್…
ಸುದ್ದಿಒನ್ : ಐಪಿಎಲ್ 2025 ರ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದೆ. ಎದುರಾಳಿ ಕೆಕೆಆರ್ ವಿರುದ್ಧ ತವರಿನಲ್ಲಿ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 23 : ನಗರದ ಜೆಸಿಆರ್ ಬಡಾವಣೆ 7 ನೇ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್…
ಸುದ್ದಿಒನ್ : ಐಪಿಎಲ್-18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಭರ್ಜರಿ ಗೆಲುವು ಸಾಧಿಸಿತು. ಬೆಂಗಳೂರು ತಂಡವು…