Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ರೈತ ಆತ್ಮಹತ್ಯೆ

---Advertisement---

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 90,000 ಸಾಲ ಪಡೆದಿದ್ದು ಜಮೀನಿನಲ್ಲಿ ತೊಗರಿ ಮತ್ತು ಕಡಲೆ ಬೆಳೆ ಹಾಕಿದ್ದರು ಆದರೆ ಮಳೆ ಬಾರದ ಹಿನ್ನೆಲೆಯಲ್ಲಿ ಬೆಳೆ ಕೈಕೊಟ್ಟಿತ್ತು ಕೈ ಸಾಲವನ್ನು ಸಹ ಮಾಡಿದ್ದರಿಂದ ಗ್ರಾಮದಲ್ಲಿ ಹೋಟೆಲ್ ನಡೆಸಿದರೂ ಸಹ ಲಾಭದಾಯಕವಾಗಿರಲಿಲ್ಲ.  ಸಾಲ ತೀರಿಸಲಾಗದೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment