Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಬಿಸಿಎಂ ಹಾಸ್ಟೆಲ್‍ನಲ್ಲಿ ಊಟದ ಸಮಸ್ಯೆ, ವಿದ್ಯಾರ್ಥಿಗಳಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.21 : ನಗರದ ದೊಡ್ಡೇರಿ ರಸ್ತೆಯಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಊಟವನ್ನು ನೀಡುತ್ತಿಲ್ಲ. ಊಟದ ಸಮಯ 7 ಗಂಟೆಯಿಂದ ಎಂಟು ಗಂಟೆಯವರೆಗೂ ಇದ್ದರೆ ಕೇವಲ 10 ನಿಮಿಷಗಳ ಕಾಲ ಊಟ ಬಡಿಸಿ ಸಿಬ್ಬಂದಿಗಳು ಮನೆಗೆ ತೆರಳುತ್ತಿದ್ದಾರೆ.

ಇದರಿಂದ ವಿದ್ಯಾರ್ಥಿಗಳಿಗೆ ರಾತ್ರಿ ಸಮಯ ಊಟದ ಸಮಸ್ಯೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು ಖಾಲಿ ಹೊಟ್ಟೆಯಲ್ಲಿ ರಾತ್ರಿ ಸಮಯ ಕಳೆಯುವಂತಾಗಿದೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಬಿಸಿಯಾದ ಊಟ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ ಇದರಿಂದ ವಿದ್ಯಾರ್ಥಿಗಳು ಊಟವಿಲ್ಲದೆ ಕಂಗಾಲಾಗಿದ್ದಾರೆ.

ಸಿಬ್ಬಂದಿಗಳು ವಿದ್ಯಾರ್ಥಿಗಳ ಮೇಲೆ ದರ್ಪವನ್ನು ತೋರಿ ಸರಿಯಾದ ಸಮಯಕ್ಕೆ ಊಟದ ವ್ಯವಸ್ಥೆಯನ್ನು ಮಾಡುತ್ತಿಲ್ಲ. ವಾರ್ಡನ್ ಬಳಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಯನ್ನು ಹೇಳಿಕೊಂಡರೆ ವಾರ್ಡನ್ ಮಾತಿಗೂ ಕೂಡ ಸಿಬ್ಬಂದಿಗಳು ಕ್ಯಾರೆ ಅನ್ನುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಊಟದ ವ್ಯವಸ್ಥೆ ಇಲ್ಲದಂತಾಗಿದೆ.

ಇದರಿಂದ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಬಿಸಿಎಂ ಅಧಿಕಾರಿ ದಿವಾಕರ್ ಮಾತನಾಡಿ ಕೂಡಲೇ ಯಾವುದೇ ತರಹ ತೊಂದರೆ ಯಾಗದಂತೆ  ಸರಿಪಡಿಸುವುದಾಗಿ ತಿಳಿಸಿದ್ದಾರೆ.

ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment