ಚಳ್ಳಕೆರೆ : ಗ್ಯಾಸ್ ಸೋರಿಕೆ ಗೃಹಪಯೋಗಿ ವಸ್ತುಗಳು ಸುಟ್ಟು ಭಸ್ಮ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 27 : ಸಿಲೆಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿ ಉರಿದು ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟಿರುವ ಘಟನೆ ಇಂದು ನಡೆದಿದೆ.

ನಗರದ ಗಾಂಧಿನಗರದ ಮಹಮದ್ ರಫಿ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ಮನೆಯಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಬೀರುವಿನಲ್ಲಿದ್ದ ಬಟ್ಟೆಗಳು ಹಾಗೂ ಗೃಹ ಉಪಯೋಗಿ ವಸ್ತುಗಳು ಸುಟ್ಟಿದ್ದು ಸಲ್ಮ ಬಾನು ಎನ್ನುವ ಮಹಿಳೆಗೆ ಸ್ವಲ್ಪಮಟ್ಟಿನ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಆಗಮಿಸಿ ಮನೆಯಲ್ಲಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಹರ ಸಹಾಸ ಮಾಡಲಾಯಿತು . ಈ ವೇಳೆ ಸಾರ್ವಜನಿಕರು ಸಹ ಈ ಕಾರ್ಯದಲ್ಲಿ ಭಾಗಿಯಾದರು. ಅಗ್ನಿಶಾಮಕ ದಳದ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು ಮನೆಯಲ್ಲಿದ್ದಂತಹ ಗೃಹಪಯೋಗಿ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿವೆ.

Share This Article
Leave a Comment

Leave a Reply

Your email address will not be published. Required fields are marked *