ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 28 : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿ ಹೊಡೆದಿದ್ದು ಬಸ್ಸಿನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ನಡೆದಿದೆ..
ಬಳ್ಳಾರಿಯಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಲ್ಯಾಣ ಸಾರಿಗೆ ಬಸ್ ತಾಲ್ಲೂಕಿನ ಹೆಗ್ಗೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಪಲ್ಟಿಯಾಗಿದ್ದು, ಸುಮಾರು 44 ಮಂದಿ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಚಳ್ಳಕೆರೆ ಪೊಲೀಸ್ ಇನ್ಸ್ಪೆಕ್ಟರ್ ಕೆ. ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬಸ್ಸಿನಲ್ಲಿ ಇದ್ದ ಪ್ರಯಾಣಿಕರನ್ನ ಬೇರೊಂದು ಬಸ್ಸಿನ ಮೂಲಕ ಸುರಕ್ಷಿತವಾಗಿ ಕಳಿಸಿಕೊಡಲಾಗಿದೆ. ರಸ್ತೆಯಲ್ಲಿ ಪಲ್ಟಿ ಹೊಡೆದಿದ್ದ ಬಸ್ಸನ್ನ ಜೆಸಿಬಿ ಯಂತ್ರದ ಮೂಲಕ ತೆರವಿನ ಕಾರ್ಯ ಮಾಡಲಾಗಿದ್ದು ರಸ್ತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















