Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ರಾಮಸಾಗರ ಗ್ರಾಮದಲ್ಲಿ ಭಾರೀ ಆಲಿಕಲ್ಲು ಮಳೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮೇ. 14 : ತಾಲೂಕಿನ ನಾಯಕನಹಟ್ಟಿ ಸಮೀಪದ ರಾಮಸಾಗರ ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಆಲಿಕಲ್ಲು ಮಳೆ ಜನರಲ್ಲಿ ಅಚ್ಚರಿ ಮೂಡಿಸಿತು.

ಮಳೆಯೊಂದಿಗೆ ಬಿದ್ದ ದೊಡ್ಡ ಗಾತ್ರದ ಆಲಿಕಲ್ಲುಗಳು ಭೂಮಿಯನ್ನು ತಂಪಾಗಿಸಿದರೆ, ಜನರಿಗೆ ಬೇಸಿಗೆಯ ಬಿಸಿಯಿಂದ ತುಸು ನಿರಾಳತೆ ನೀಡಿದವು.
ಆದರೆ ಇದೇ ವೇಳೆ ರಾಮಸಾಗರ ಗ್ರಾಮದ ಕೃಷ್ಣ ಎಂಬುವರ ದಾಳಿಂಬೆ ತೋಟದಲ್ಲಿ ಬಿದ್ದ ಭಾರೀ ಗಾತ್ರದ ಆಲಿಕಲ್ಲುಗಳ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೋಟದೊಳಗೆ ಬಿದ್ದಿದ್ದ ದೊಡ್ಡ ಗಾತ್ರದ ಆಲಿಕಲ್ಲುಗಳನ್ನು ಗ್ರಾಮಸ್ಥರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಹಂಚಿಕೊಂಡಿದ್ದು, ವೀಡಿಯೋಗೆ ಸಾರ್ವಜನಿಕರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಕಸ್ಮಿಕವಾಗಿ ಸುರಿದ ಆಲಿಕಲ್ಲು ಮಳೆಯಿಂದ ಕೆಲ ಕೃಷಿ ಬೆಳೆಗಳಿಗೆ ಹಾನಿಯಾಗಿರುವ ಸಾಧ್ಯತೆ ಇದ್ದು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಇಂತಹ ಆಲಿಕಲ್ಲು ಮಳೆ ಅಪರೂಪವಾಗಿ ಕಾಣಸಿಗುತ್ತದೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now