ನಾಳೆ ಚಳ್ಳಕೆರೆ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ :  ಚಾಲನೆ ನೀಡಲಿರುವ ಸಿಟಿ ರವಿ

suddionenews
1 Min Read

ಚಳ್ಳಕೆರೆ, (ಸೆ.14) : ನಗರದಲ್ಲಿ ವಿಶ್ವಹಿಂದೂಪರಿಷತ್ ಮತ್ತು ಭಜರಂಗದಳ ಪ್ರತಿಷ್ಟಾಪನೆ ಮಾಡಿರುವ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಗುರುವಾರ ಸಾವಿರಾರು ಹಿಂದೂ ಕಾರ್ಯಕರ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ನಗರದ ಬಿಇಒ ಕಚೇರಿಯಿಂದ ಪ್ರಾರಂಭವಾಗುವ ಶೋಭಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಚಾಲನೆ ನೀಡುವರು. ಶೋಭಾಯಾತ್ರೆ ನಗರದ ಪ್ರಮುಖ‌ಬೀಡಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಮೆರವಣಿಗೆ ನಡೆಯುವ ಪ್ರಮುಖ‌ ಬೀದಿಗಳಲ್ಲಿ ಕೇಸರಿಯ ಬಂಟಿಂಗ್, ಬ್ಯಾನರ್ ಗಳು ರಾರಾಜಿಸುತ್ತಿವೆ.

ನಗರದ ನೂರಾರು ಭಕ್ತರು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಪೊಲೀಸ್ ಬಂದೋಬಸ್ತ್ ಸಹ ಆಯೋಜಿಸಿದೆ. ನಗರದ ಪ್ರಮುಖ‌ ಬೀದಿಗಳಲ್ಲಿ ಮೆರವಣಿಗೆ ನಂತರ ಅಜ್ಜಯ್ಯನಗುಡಿ ಕೆರೆಯಲ್ಲಿ ವಿಸರ್ಜನೆ ನಡೆಯಲಿದೆ.

ಜಿಲ್ಲಾ ರಕ್ಷಣಾಧಿಕಾರಿ ಭೇಟಿ :- ನಗರದಲ್ಲಿ ಗುರುವಾರ ನಡೆಯುವ ಶೋಭಾಯಾತ್ರೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೋಭಾಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *