Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಳ್ಳಕೆರೆ : ಗೋಪನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎಚ್ ಕೆ ಸುಮಿತ್ರ ಶ್ರೀನಿವಾಸ ಅವಿರೋಧ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜುಲೈ. 23 : ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆಯ ನೀಡುತ್ತೇನೆ ಎಂದು ಗೋಪನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಎಚ್ ಕೆ. ಸುಮಿತ್ರ ಶ್ರೀನಿವಾಸ್ ಹೇಳಿದರು.

ಗೋಪನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ನಂತರ ಅವರು ಮಾತನಾಡಿ, ಅಧ್ಯಕ್ಷರ ಚುನಾವಣೆಯಲ್ಲಿ ನನ್ನನ್ನ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಈ ಮೂಲಕ ಅಭಿನಂದನೆ ತಿಳಿಸುತ್ತೇನೆ. ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗೋಪನಹಳ್ಳಿ, ಚಿಕ್ಕೇನಹಳ್ಳಿ ಹಾಗೂ ರೆಡ್ಡಿ ಹಳ್ಳಿಗಳು ಒಳಪಟ್ಟಿದ್ದು ಗ್ರಾಮಗಳಲ್ಲಿನ ಮೂಲಸೌಕರ್ಯಗಳಾದ ಚರಂಡಿ ಸ್ವಚ್ಛತೆ ಶುದ್ಧವಾದ ಕುಡಿಯುವ ನೀರು, ಮನೆ ಇಲ್ಲದವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಹಾಗೂ ಸ್ಮಶಾನಗಳ ಸ್ವಚ್ಛತೆ, ಹಾಗೂ ವಿದ್ಯುತ್ ಕಂಬಗಳಿಗೆ ಬಲ್ಪಗಳ ವ್ಯವಸ್ಥೆ, ಕಲ್ಪಿಸಲು ನಮ್ಮ ಗ್ರಾಮ ಪಂಚಾಯತಿ ಸದಸ್ಯರ ಒಡಗೂಡಿ ಪ್ರಯತ್ನ ಮಾಡುತ್ತೇನೆ. ಇಂದು ನನಗೆ ಅಧ್ಯಕ್ಷರಾಗಲು ಅವಕಾಶ ಮಾಡಿಕೊಟ್ಟ ಗ್ರಾಮ ಪಂಚಾಯತಿ ಸದಸ್ಯರಿಗೆ ಹಾಗೂ 3 ಗ್ರಾಮಗಳ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಾಜನಾಯ್ಕ್ ಎಚ್. ಕೆ. ಸುಮಿತ್ರ ಶ್ರೀನಿವಾಸ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಭವಾನಿ ಉಮೇಶ, ಎಸ್ ಡಿ.ನಾಗರಾಜ್, ಗೀತಾ ಪರಮೇಶ, ಲಕ್ಷ್ಮಿ ಹರೀಶ, ಕಲಾವತಿ, ಕೆ.ಟಿ.ಶಿವಣ್ಣ, ಹೊಚಿ ಬೋರಯ್ಯ, ಕೊಡಳ್ಳಮ್ಮ,ಲಕ್ಷ್ಮಕ್ಕ, ಪಿ.ಎನ್.ದೊಡ್ಡೆರಂಗೆಗೌಡ,
ಪಿಡಿಓ ಎನ್ ಆರ್ ತಿಪ್ಪೇಸ್ವಾಮಿ, ಕಾರ್ಯಕ್ರದರ್ಶಿ ಎಸ್ ಆರ್ ಕರಿಯಪ್ಪ, ಜೆಡಿಎಸ್ ನ ತಾಲೂಕು ಕಾರ್ಯದರ್ಶಿ ಹೆಗ್ಗೆರೆ ಆನಂದಪ್ಪ, ಗ್ರಾಮಪಂಚಾಯಿತಿ ಸಿಬ್ಬಂದಿಗಳು ಚಿಕ್ಕೇನಹಳ್ಳಿ ಗ್ರಾಮಸ್ಥರು, ಗೋಪನಹಳ್ಳಿ ಗ್ರಾಮದ ಮುಖಂಡರಾದ ಗಿರೀಶ್, ಪರಮೇಶ್ ಮೂರ್ತಿ,ಹಾಗೂ ರೆಡ್ಡಿಹಳ್ಳಿ ಗ್ರಾಮದ ಮುಖಂಡರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...