ವರದಿ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.23 : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ದಂಪತಿಗಳ ಸ್ಥಿತಿ ಗಂಭೀರವಾಗಿದೆ.
ತಾಲೂಕಿನ ಗೋಪನಹಳ್ಳಿ ಗ್ರಾಮದ ಯಾದವ್ ನಗರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.ಈ ಅಪಘಾತಕ್ಕೆ ಬಸ್ ಚಾಲಕನ ಅಜಾಗ್ರತೆಯ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೈಕ್ ನಲ್ಲಿದ್ದ ದಂಪತಿಗಳು ಮೀರಸಾಬಿಬಳ್ಳಿ ಗ್ರಾಮದ ನಾಗೇಗೌಡ ಹಾಗೂ ಅವರ ಪತ್ನಿ ಕಾವ್ಯ
ಎಂದು ತಿಳಿದು ಬಂದಿದ್ದ ಇಬ್ಬರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ 112 ಪೋಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












