ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 20 : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 11.10 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಅಬ್ಬೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ :
ತೊರೆ ಕೊಲಮ್ಮನಹಳ್ಳಿ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು, ನಿರ್ದೇಶನದಂತೆ ಚಳ್ಳಕೆರೆ ಉಪ ವಿಭಾಗದ ಡಿವೈಎಸ್ಪಿ ಸತ್ಯನಾರಾಯಣ ರಾವ್ ಮಾರ್ಗದರ್ಶನದಲ್ಲಿ ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ ನೇತೃತ್ವದಲ್ಲಿ ನಾಯಕನಹಟ್ಟಿ ಪೊಲೀಸ್ ಉಪನಿರೀಕ್ಷಕ ಜಿ ಪಾಂಡುರಂಗಪ್ಪ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ 791 ಗ್ರಾಂಜಾ ಗಿಡಗಳನ್ನು ಅಂದಾಜು ಮೌಲ್ಯ 11.10.000 ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
ದಾಳಿಯಲ್ಲಿ ಅಬಕಾರಿ ಅಧೀಕ್ಷಕ ಕಿರಣ್ ಡಿ ಜಿ, ಮುಖ್ಯಪೇದೆ ಇ ಎಂ ಭಾಷಾ,ಪೇದೆಗಳಾದ ಅಣ್ಣಪ್ಪ, ಕುಮಾರ್ ಪಿ, ದೇವರಾಜ್ ಕೋಟಿ , ಶಿವಣ್ಣ, ವೀರೇಶ್, ಚಾಲಕ ಮಹೇಶ್ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









