Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಜಮೀನು ವಿಚಾರ ಗಲಾಟೆ : ಇಬ್ಬರ ಮೇಲೆ ಹಲ್ಲೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 02 : ಜಮೀನಿನ ಬೇಲಿಗೆ ಬೆಂಕಿ ಇಟ್ಟ ವಿಚಾರಕ್ಕೆ ದೊಣ್ಣೆಯಿಂದ ಹಲ್ಲೆ ಮಾಡಿದ ಕಾರಣ ಒರ್ವನಿಗೆ ಕೈ ಮುರಿದು ಮತ್ತೊರ್ವ ಮಹಿಳೆಗೆ ಗಾಯಗಳಾದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲ್ಲೂಕಿನ ಯಲಗಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ವಿರೂಪಾಕ್ಷ ಎನ್ನುವ ವ್ಯಕ್ತಿ ಬೇಲಿಗೆ ಬೆಂಕಿ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸ್ವಲ್ಪ ಮೆಕ್ಕೆ ಜೋಳ ಬೆಳೆ ಸುಟ್ಟಿದೆ. ಬೇಲಿಗೆ ಬೆಂಕಿ ಇಟ್ಟಿದ್ದಕ್ಕೆ ಪ್ರಶ್ನೆ ಮಾಡಿದಕ್ಕೆ ವಿರುಪಾಕ್ಷ, ಲಕ್ಷ್ಮೀದೇವಿ, ಚಂದ್ರಣ್ಣ ಸುದೀಪ್ ಉಮೇಶ ಇವರು ಗುಂಪು ಕಟ್ಟಿಕೊಂಡು ಬಂದು ಕೈಯಲ್ಲಿದ್ದ ದೊಣ್ಣೆ ಹಾಗೂ ಕಲ್ಲುಗಳಿಂದ ಚನ್ನವೀರ ಹಾಗೂ ನೇತ್ರಾವತಿ ಚೆಲಿಮಕ್ಕ ಇವರ ಮೇಲೆ ಹಲ್ಲೆ ಮಾಡಿದ್ದಾರೆ. ಚನ್ನವೀರ ಇವರಗೆ ಕೈ ಮುರಿದ್ದು ಚಲಿಮಕ್ಕ ಎನ್ನುವ ಮಹಿಳೆಗೆ ತಲೆ ಹಾಗೂ ಇತರೆ ಭಾಗಗಳಿಗೆ ಗಾಯಗಳಾಗಿದ್ದು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಆಸ್ಪತ್ರೆ ಗೆ ದಾಖಲಿಸಿದ್ದಾರೆ.

ಈ ಗಲಾಟೆ ವಿಚಾರ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು. ಹಲ್ಲೆ ಮಾಡಿಸಿದ ವಿರುಪಾಕ್ಷ ಸಹ ‌ ಪ್ರಕರಣವನ್ನ ದಾಖಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment