Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕೊನೆಗೆ ಸೆರೆಸಿಕ್ಕ ಚಿರುತೆ ; ನಿಟ್ಡುಸಿರು ಬಿಟ್ಡ ಗ್ರಾಮಸ್ಥರು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 18 : ತಾಲೂಕಿನ ದೊಡ್ಡಚೆಲ್ಲೂರು ‌ಶಾಂತಿನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ರೈತರ ಕುರಿ, ಮೇಕೆ ಸೇರಿದಂತೆ ಜಾನುವಾರುಗಳನ್ನು ಕೊಂದು ತಿನ್ನುತ್ತಿತ್ತು. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಗ್ರಾಮಸ್ಥರ ಮನವಿಗೆ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಬೋನು ಅಳವಡಿಸಿದ್ದರು. ಇಂದು ಆ ಬೋನಿಗೆ ಚಿರತೆ ಬೋನಿಗೆ ಬಿದ್ದಿದೆ. ಬೊನಿಗೆ ಬಿದ್ದ ಚಿರತೆ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿರುವುದರಿಂದ ತಲೆ ಹಾಗೂ ಹಣೆ ಸ್ವಲ್ಪ ಗಾಯಗಳಾಗಿದ್ದು ಸೂಕ್ತ ಚಿಕಿತ್ಸೆಯ ನಂತರ ಅರಣ್ಯ ಧಾಮಕ್ಕೆ ಬಿಡಲಾಗಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ಗುರುಲಿಂಗಪ್ಪ ತಿಳಿಸಿದ್ದಾರೆ.

ಬೋನಿಗೆ ಸೆರೆಯಾದ ಚಿರತೆಯನ್ನು ಕಂಡ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚಿರತೆಯ ಆತಂಕದಿಂದ ದಿನನಿತ್ಯ ಜೀವನದಲ್ಲಿ ಆತಂಕದಲ್ಲಿದ್ದ ಜನರು ಇದೀಗ ನೆಮ್ಮದಿ ಕಂಡಿದ್ದು, ಅರಣ್ಯ ಇಲಾಖೆಯ ಕಾರ್ಯಕ್ಕೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now