ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಮೇ. 12 : ನಗರದ ಶ್ರೀ ವೀರಭದ್ರಸ್ವಾಮಿ ಜಾತ್ರೆಯಲ್ಲಿ ರಥೋತ್ಸವಕ್ಕೂ ಮುನ್ನ ಬಾವುಟವನ್ನು ಹರಾಜು ಹಾಕುವ ಸಂಪ್ರದಾಯ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ.
ಅಂದರಂತೆ ಇಂದು ದೊಡ್ಡ ರಥೋತ್ಸವಕ್ಕೂ ಮುನ್ನ ಮುಕ್ತಿ ಬಾವಟವನ್ನು ಹರಾಜು ಹಾಕಲಾಗಿತ್ತು.
ಚಿತ್ರದುರ್ಗ ಜಿಲ್ಲಾ ಸಚಿವ ಡಿ ಸುಧಾಕರ್ 15 ಲಕ್ಷದ 50 ಸಾವಿರ ಕ್ಕೆ ಮುಕ್ತಿ ಬಾವುಟವನ್ನು ತಮ್ಮದಾಗಿಸಿಕೊಂಡರು.
ಚಳ್ಳಕೆರೆ ನಗರದ ಆರಾಧ್ಯದೈವ ಶ್ರೀವೀರಭದ್ರಸ್ವಾಮಿ ರಥೋತ್ಸವ ಶ್ರದ್ಧಾಭಕ್ತಿಯಿಂದ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು.
ವೀರಭದ್ರಸ್ವಾಮಿಗೆ ಬೃಹತ್ ಹೂವಿನ ಹಾರ, ಬಣ್ಣಗಳ ಬಾವುಟಗಳಿಂದ ಅಲಂಕರಿಸಲ್ಪಟ್ಟ ರಥದಲ್ಲಿ ಸ್ವಾಮಿ ಆಸೀನಗೊಳಿಸಿ ಪೂಜೆ ಸಲ್ಲಿಸಿದ ನಂತರ ಜಯ ಘೋಷಣೆಗಳೊಂದಿಗೆ ಅಪಾರ ಸಂಖ್ಯೆಯ ಭಕ್ತಸಮೂಹ ಸಮ್ಮುಖದಲ್ಲಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ರಥದ ಬೀದಿಯಲ್ಲಿ ಗಾಂಭೀರ್ಯದಿಂದ ಹೊರಟ ತೇರಿನ ಮುಂಭಾಗ ಮಂಗಳ ವಾದ್ಯಗಳು ಕರಡಿ ಮಜಲು, ನಂದಿಕೋಲು, ಕೋಲಾಟ ಮತ್ತಿತರೆ ಜಾನಪದ ಕಲಾತಂಡಗಳು ಸಾಥ್ ನೀಡಿದವು. ಭಕ್ತ ಸಮೂಹ ಸ್ವಾಮಿಗೆ ಜಯಕಾರ ಹಾಕುತ್ತಾ ಸೂರುಬೆಲ್ಲ ಮೆಣಸು, ಬಾಳೆಹಣ್ಣುಗಳನ್ನು ತೇರಿಗೆ ಎಸೆಯುವ ಮೂಲಕ ತಮ್ಮ ಹರಕೆ ಅರ್ಪಿಸಿ ಪುನೀತ ಭಾವದೊಂದಿಗೆ ತಮ್ಮ ಭಕ್ತಿ ಸಮರ್ಪಿಸುತ್ತಿದ್ದ ದೃಶ್ಯ ಕಂಡು ಬಂದಿತು.
ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್ ಶಾಸಕರಾದ ಟಿ.ರಘುಮೂರ್ತಿ, ನಗರಸಭೆ ಅಧ್ಯಕ್ಷ ಮಂಜುಳ ಪ್ರಸನ್ನಕುಮಾರ್., ಉಪಾಧ್ಯಕ್ಷ ಕವಿತ ಬೊರಯ್ಯ.ಜಿಲ್ಲಾ ಕೆಡಿಪಿ ಸದಸ್ಯ ಕೆಸಿ.ನಾಗರಾಜ್ ಸೇರಿದಂತೆ ದೇವಸ್ಥಾನದ ಗೌಡರು ಪೂಜಾರಿಗಳು ಹಾಗೂ ಪುರಂತಪ್ಪ ಸೇರಿದಂತೆ ಅಪಾರ ಬಂಧು ಬಳಗ ಈ ಜಾತ್ರೆಯಲ್ಲಿ ಭಾಗಿಯಾದರು..
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












