Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಪ್ರೇಯಸಿಯಿಂದಲೇ ಪ್ರಿಯಕರನ ಕೊಲೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 18 : ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪ್ರೇಯಸಿಯೇ ಪ್ರಿಯತಮನನ್ನು ಕೊಂದು ತನ್ನದೇ ಜಮೀನಿನಲ್ಲಿರುವ ಕೃಷಿಹೊಂಡದಲ್ಲಿ ಶವವನ್ನು ಹೂತಿಟ್ಟಿರುವ ಘಟನೆ ನಡೆದಿದೆ.

ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಕಳೆದ 10 ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶದ ವೀರಾಪುರ ಗ್ರಾಮದ ಬಾಲರಾಜ್ ಹತ್ಯೆಗೀಡಾದ ವ್ಯಕ್ತಿ. ಮೂಲತಃ ಆಂಧ್ರ ಪ್ರದೇಶದ ವೀರಾಪುರದ ಬಾಲರಾಜ್ ಹತ್ತು ವರ್ಷಗಳ ಹಿಂದೆ ಮೊಳಕಾಲ್ಮುರು ತಾಲ್ಲೂಕು ಮಾರಮ್ಮನಹಳ್ಳಿ ಗ್ರಾಮದ ಮಹಾಂತಮ್ಮ ಎಂಬಾಕೆಯ ಜೊತೆ ಮದುವೆಯಾಗಿದ್ದು, ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಈ ಮಧ್ಯೆ ಬಾಲರಾಜ್ ಕಳೆದ ಎರಡು ವರ್ಷಗಳಿಂದ ಹಿರೇಹಳ್ಳಿಯ ಹೊರವಲಯದ ಜಮೀನಿನಲ್ಲಿ ಗಂಡನನ್ನು ಕಳೆದುಕೊಂಡು ವಾಸವಾಗಿರುವ ನಾಗಮಣಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದನು. ಬಾಲರಾಜ್ ಎರಡು ವರ್ಷಗಳಿಂದ ಹೆಂಡತಿ ಮಕ್ಕಳನ್ನು ಬಿಟ್ಟು ನಾಗಮಣಿಯೊಂದಿಗೆ ಜಮೀನಿನಲ್ಲಿ ಕೆಲಸ ಮಾಡಿಕೊಂಡು ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದನು. ಆದರೆ ಒಂದು ತಿಂಗಳ ಹಿಂದೆ ತನ್ನ ಊರಾದ ವೀರಾಪುರಕ್ಕೆ ತೆರಳಿದ್ದನು. ಒಂದು ತಿಂಗಳಿಂದ ಹಿರೇಹಳ್ಳಿ ಕಡೆಗೆ ಆತ ಸುಳಿದಿರಲಿಲ್ಲ. ಆದರೆ ಪ್ರೇಯಸಿ ನಾಗವೇಣಿ ಊರಲ್ಲಿ ಮಾರಮ್ಮನ ಹಬ್ಬ ಇದೆ ಎಂದು 10 ದಿನಗಳ ಹಿಂದೆ ಬಾಲರಾಜ್‌ನನ್ನು ಕರೆಯಿಸಿಕೊಂಡಿದ್ದಳು. ಈ ವೇಳೆ ನಾಗಮಣಿಯು ಮತ್ತೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನುವ ಅನುಮಾನದಲ್ಲಿ ಪರಸ್ಪರರ ಮಧ್ಯೆ ವೈಮನಸ್ಸು ಉಂಟಾಗಿತ್ತು. ಅಂತಿಮವಾಗಿ ವೈಮನಸ್ಸು ಬಾಲರಾಜ್‌ನ ಕೊಲೆಯಲ್ಲಿ ಅಂತ್ಯವಾಗಿದೆ. ಬಳಿಕ ನಾಗಮಣಿ ತನ್ನದೇ ಜಮೀನಿನ ಮೂಲೆಯಲ್ಲಿದ್ದ ಕೃಷಿಹೊಂಡದಲ್ಲಿ ಮೃತದೇಹ ಹೂತಿಟ್ಟು ಎನೂ ಗೊತ್ತಿಲ್ಲದಂತೆ ಸುಮ್ಮನಿದ್ದಳು.

ಆದರೆ ಕೃಷಿ ಹೊಂಡದ ಮಣ್ಣಿನಲ್ಲಿ ಹೂತಿಟ್ಟ ಶವದ ವಾಸನೆ ಎರಡು ದಿನಗಳಿಂದ ಬರಲಾರಂಭಿಸಿತ್ತು. ಕೂಡಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಕುರಿಗಾಹಿಗಳಿಗೆ ಅನುಮಾನ ಮೂಡಿತ್ತು. ಕೂಡಲೇ ತಳಕು ಪೊಲೀಸರಿಗೆ ಕೊಲೆ ನಡೆದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ತಳಕು ಪೊಲೀಸರು ನಾಗಮಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬಯಲಾಗಿದೆ.
ಚಿತ್ರದುರ್ಗದ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಅವರ ಸಮ್ಮುಖದಲ್ಲೇ ಹೂತಿಟ್ಟ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸ್ಥಳದಲ್ಲಿ ತಹಶೀಲ್ದಾರ್ ರೆಹಾನ್‌ಪಾಷ, ಚಳ್ಳಕೆರೆ ಡಿವೈಎಸ್‌ಪಿ ಟಿ.ಬಿ.ರಾಜಣ್ಣ, ಪೊಲೀಸ್‌ವೃತ್ತ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now