Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ರಾಜ್ಯ ಮಟ್ಟಕ್ಕೆ ನೆಹರು ಶಾಲೆಯ ಮಕ್ಕಳು ಆಯ್ಕೆ

---Advertisement---

 

ಸುದ್ದಿಒನ್, ಚಳ್ಳಕೆರೆ :  ತಾಲ್ಲೂಕಿನ ನೆಹರು ಗ್ರಾಮಾಂತರ ಪ್ರೌಢಶಾಲೆಯ ಹರ್ಷಿಣಿ ಟಿ.ಎಲ್ 10ನೇ ತರಗತಿ ಮತ್ತು ನೀತುಶ್ರೀ ಹೆಚ್. 9ನೇ ತರಗತಿಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಚಿತ್ರದುರ್ಗ ನಗರದ ಮಹಾರಾಣಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ  ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತೀರ್ಪುಗಾರರಾದ ನಾಗಭೂಷಣ್ ಕೆ.ಟಿ. ಹರೀಶ್ ಹೆಚ್.ಎಂ., ಗೋವಿಂದ ರಾಜು, ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು,ಶಾಲಾ ಸಿಬ್ಬಂದಿ ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment