ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಜುಲೈ. 24 : ಬೈಕ್ ಹಾಗೂ ಬುಲೆರೋ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಮೊಳಕಾಲ್ಮೂರು ತಾಲ್ಲೂಕಿನ ಸಮೀರ್(26) ಹಾಗೂ ಅರ್ಪೀನಬಾನು(23) ಎನ್ನುವ ನವದಂಪತಿ ಚಳ್ಳಕೆರೆಗೆ ಬರುತ್ತಿದ್ದು ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆ ಹೋಗುತ್ತಿದ್ದ ಬುಲೇರೋ ಪಿಕಾಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಕೊಂಡ್ಲಹಳ್ಳಿಯ ಸಮೀರ್ ಸಾವನ್ನಪ್ಪಿದ್ದು, ಇಮಾಮಪುರ ಗ್ರಾಮದ ಅರ್ಪೀನಭಾನು ಗಾಯಗೊಂಡಿದ್ದಾರೆ.

ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಈ ಘಟನೆ ನಡೆದಿದೆ . ಅಪಘಾತವಾದ ಘಟನ ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ರಾಜ ಫಕ್ರುದ್ದೀನ್ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









