ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 10 : ತಾಲೂಕಿನ ಸಾಣಿಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟಿವಿಎಸ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ 5 ಗಂಟೆ ಸಮಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಮಜರೇ ಗ್ರಾಮ ಸಿದ್ದೇಶ್ವರನ ಬಡಾವಣೆಯ ವೀರಭದ್ರಪ್ಪ (45 )ವರ್ಷ ಎಂದು ಗುರುತಿಸಲಾಗಿದ್ದು. ಪ್ರತಿದಿನ ಚಳ್ಳಕೆರೆ ಮಾರುಕಟ್ಟೆಗೆ ಬಂದು ಸೊಪ್ಪು ತೆಗೆದುಕೊಂಡು ಗ್ರಾಮದಲ್ಲಿ ಮಾರಾಟ ಮಾಡಲು ಟಿವಿಎಸ್ ವಾಹನದಲ್ಲಿ ಹೋಗುತ್ತಿರುವಾಗ ರಸ್ತೆ ಕ್ರಾಸ್ ಮಾಡುವಾಗ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೀರಭದ್ರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








