ಸುದ್ದಿಒನ್, ಚಿತ್ರದುರ್ಗ,ಜುಲೈ. 03 : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕುದಾಪುರದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಜುಲೈ 5 ರಂದು ಭಾನುವಾರ ಮೂರು ಜಿಲ್ಲೆಗಳು ಮತ್ತು ಆಂದ್ರಪ್ರದೇಶ ಗಡಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಸಂಚಾಲಕ ಮತ್ತು ಮುಖ್ಯ ಸಂಶೋಧನಾ ವಿಜ್ಞಾನಿ ಡಾ. ಬಿ. ಸುಬ್ಬಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಮೆಟ್ರೋ ಸಂಸ್ಥೆಯ ಶಿಪ್ರಕಾಶ ಆರ್ ಅಧ್ಯಕ್ಷತೆ ವಹಿಸಲಿದ್ದಾರೆ. ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ಆಂದ್ರಪ್ರದೇಶ ಗಡಿ ಘಟಕದ ಅಧ್ಯಕ್ಷ ಅಂಜನ್‍ಕುಮಾರ್, ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಭಾಗವಹಿಸಲಿದ್ದಾರೆ. 30 ಕ್ಕೂ ಹೆಚ್ಚು ಕವಿಗಳು ಕಾವ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾಗವಹಿಸಲು ಇಚ್ಛಿಸುವವರು 9449510078 ಈ ಮೊಬೈಲ್ ಸಂಖ್ಯೆಗೆ ಕರೆ ಮಾಟಿ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




















