Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಈ ಹಳ್ಳಿಗಳಲ್ಲಿ ಜೂ.26ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಜೂ.25: ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯ ಪರಶುರಾಂಪುರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.26 ರಂದು ತ್ರೈಮಾಸಿಕ ನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಜೂನ್ 26 ರಂದು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಪರಶುರಾಂಪುರ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಾದ ಜಾಜೂರು, ಪಗಡಲಬಂಡೆ, ಸಿದ್ದೇಶ್ವರನದುರ್ಗ, ಪರುಶುರಾಂಪುರ, ದೊಡ್ಡಚೆಲ್ಲರೂ, ಚೌಳೂರು, ಪಿ.ಮಹದೇವಪುರ, ದೊಡ್ಡಬೀರನಹಳ್ಳಿ ಪಂಚಾಯಿತಿಗಳು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಚಳ್ಳಕೆರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಶಿವಪ್ರಸಾದ್ ತಿಳಿಸಿದ್ದಾರೆ.

ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯ ವಿಶ್ವೇಶ್ವರಪುರ, ದ್ಯಾವರನಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಜೂ.27ರಂದು ತ್ರೈಮಾಸಿಕ ನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಜೂನ್ 27 ರಂದು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರಗಳ ಮಾರ್ಗಗಳಾದ ಚೌಳೂರು, ಮೀರಸಾಬಿಹಳ್ಳಿ, ಬುಡ್ನಹಟ್ಟಿ, ದುರ್ಗಾವರ, ಕೆರೆಹಿಂದ್ಲಹಟ್ಟಿ, ಜಾಜೂರು, ಚನ್ನಮ್ಮನಾಗತಿಹಳ್ಳಿ, ದೇರಮರಿಕುಂಟೆ, ದೊಡ್ಡೇರಿ ಪರುಶುರಾಂಪುರ ಹಾಗೂ ದೊಡ್ಡಬೀರನಹಳ್ಳಿ ಪಂಚಾಯಿತಿಗಳು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಚಳ್ಳಕೆರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಶಿವಪ್ರಸಾದ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment