Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸದಂತೆ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ನವೆಂಬರ್. 26 : ಕರ್ನಾಟಕದಲ್ಲಿ ಕಾರ್ಮಿಕ ಸಂಹಿತೆ ಜಾರಿಗೊಳಿಸಿದಂತೆ ಅಗ್ರಹಿಸಿ ಸಿಐಟಿಯುಸಿ ಸಂಘಟನೆಯಿಂದ ನಗರದಲ್ಲಿ ‌ಇಂದು ಬೃಹತ್ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು
ನಗರದ ಎಪಿಎಂಸಿಯಿಂದ ಹೊರಟ ಪ್ರತಿಭಟನಾಕಾರರು ತಾಲೂಕು ಕಚೇರಿ ಮುಂದೆ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡಿ ನಂತರ ಮಾತನಾಡಿದ ಸಿ ಐ ಟಿ ಯು ನ ಪ್ರಧಾನ ಕಾರ್ಯದರ್ಶಿ ಟಿ. ತಿಪ್ಪೇಸ್ವಾಮಿ 4 ಸಂಹಿತೆಗಳ ಅಧಿಸೂಚನೆಯನ್ನು ರದ್ದುಗೊಳಿಸಬೇಕು. ರಾಜ್ಯ ಸರ್ಕಾರ ಈ ನಿಯಮಗಳನ್ನ ರಚಿಸಬಾರದು. ಶ್ರಮ ಶಕ್ತಿ ನೀತಿ 2025 ಎಂದಾಗಬೇಕು.

ನೀತಿ -2025 ನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು. ಮತ್ತು ರಾಜ್ಯ ಸರ್ಕಾರ ಇದನ್ನ ತಿರಸ್ಕರಿಸಬೇಕು. ಕನಿಷ್ಠ ವೇತನ ಮಂಡಳಿ ಶಿಫಾರಸ್ಸು ಮಾಡಿರುವ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಿ 36,000 ವೇತನ ಮಾಡಬೇಕು. ರಾಜ್ಯದಲ್ಲಿ ಕಾರ್ಖಾನೆ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು . 12 ಗಂಟೆಗಳ ಕೆಲಸವನ್ನ ಕಡ್ಡಾಯ ಮಾಡಕೋಡದು. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿಗೆ ಅನುದಾನವನ್ನು ಒದಗಿಸಿ ನಿವೃತ್ತಿ ಸೌಲಭ್ಯ ಕೊಡಬೇಕು ಮತ್ತು ಸಾಮಾಜಿಕ ಭದ್ರತೆ ನೀಡಬೇಕು. ಕನಿಷ್ಠ ವೇತನ ಜಾರಿಗೆ ಸರ್ಕಾರ ಕಟ್ಟುನಿಟ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು .ಗಾರ್ಮೆಂಟ್ಸ್ ಪ್ಲಾಂಟಿಷನ್ ಮತ್ತು ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಅಂಗನವಾಡಿ ಬಿಸಿ ಊಟ ಮತ್ತು ಆಶಾ ಕಾರ್ಯಕರ್ತೆರಿಗೂ ಕನಿಷ್ಠ ವೇತನವನ್ನು ಖಚಿತ ಪಡಿಸಬೇಕು ಇಲ್ಲವಾದರೆ ಹೋರಾಟ ಉಗ್ರವಾದ ಹೋರಾಟ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now