ಚಳ್ಳಕೆರೆ : ಕೋಡಿಹಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಚಿಣ್ಣರ ಕಲರವ ಮತ್ತು ವೈಭವದ ಶಾಲಾ ವಾರ್ಷಿಕೋತ್ಸವ

ವರದಿ ಮತ್ತು ಫೋಟೋ ಕೃಪೆ
ಕೋಡಿಹಳ್ಳಿ ಟಿ.ಶಿವಮೂರ್ತಿ, ಚಳ್ಳಕೆರೆ
ಮೊ : 97427 56304

ಸುದ್ದಿಒನ್,  ಚಳ್ಳಕೆರೆ, ಮಾರ್ಚ್. 02 :  ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 2024-25 ರ ಶಾಲಾ ವಾರ್ಷಿಕೋತ್ಸವ ಚಿಣ್ಣರ ಕಲರವ ವೈಭವ ಸಮಾರಂಭವು ಶನಿವಾರ ಸಂಜೆ ಅತ್ಯಂತ ಅದ್ದೂರಿಯಾಗಿ ನಡೆಯಿತು.

ಚಳ್ಳಕೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದ ಎಸ್.ಸುರೇಶ್ ಕುಮಾರ್ ಹಾಗೂ ವೇದಿಕೆಯಲ್ಲಿನ ಇನ್ನಿತರೆ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಪೂರಕವಾಗುತ್ತದೆ. ಅಲ್ಲದೆ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರದರ್ಶಿಸಲು ಇಂತಹ ವೇದಿಕೆಗಳು ಅವಶ್ಯಕ ಎಂದರು. ಇಲ್ಲಿನ ಶಾಲಾ ಕೊಠಡಿಗಳ ದುರಸ್ತಿಗೆ ಅನುದಾನವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರು ಆದ ಶ್ರೀಮತಿ ಎಲ್.ರತ್ನಮ್ಮ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಶಾಲೆಯಲ್ಲಿ ಸಹ ಪಠ್ಯ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಂದಿನ ಉತ್ತಮ ಫಲಿತಾಂಶ ನಿರೀಕ್ಷೆಯೊಂದಿಗೆ ಗ್ರಾಮದ ಎಲ್ಲ ಪೋಷಕರು ನಮ್ಮ ಶಾಲೆಯ ಎಲ್ಲ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಅತ್ಯಂತ ಶ್ರಮ ವಹಿಸುತ್ತಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.

ನಂತರ ಚಿಕ್ಕಮ್ಮನಹಳ್ಳಿ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ಏಚ್. ಜಗನ್ನಾಥ್ ರವರು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಯಾವ ಖಾಸಗಿ ಸಂಸ್ಥೆಯ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ,ಬೋಧನೆ ಉಚಿತ ಊಟ ವಸತಿ ವ್ಯವಸ್ಥೆ ಇರುತ್ತದೆ. ಆದರೂ ಖಾಸಗಿ ಶಾಲೆಗಳಿಗೆ ಜನರು ಹೆಚ್ಚು ಒಲವು ಮತ್ತು ನೋಂದಣಿ ಮಾಡಿಕೊಳ್ಳುತ್ತಿರುವುದು ಹಾಗೂ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು. ಶಾಲೆಯ ಸಹ ಶಿಕ್ಷಕಿಯಾದ ಆರ್.ಆಶಾ ರವರು 2024-25 ರ ಶಾಲಾ ವಾರ್ಷಿಕ ವರದಿಯನ್ನು ಮುಖ್ಯ ವೇದಿಕೆಯಲ್ಲಿ ಎಲ್ಲರ ಸಮ್ಮುಖದಲ್ಲಿ ಓದಿ ಪ್ರಸ್ತುತ ಪಡಿಸಿದರು. ಹಾಗೆ ಪೋಷಕರ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಪೋಷಕರಿಗೆ ಬಹುಮಾನ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಿ.ಆರ್.ಪಿ ಸುರೇಶ್ ಮತ್ತು ವಿಷ್ಣುವರ್ಧನ್, ಬೇಡರೆಡ್ಡಿಹಳ್ಳಿ ಶಾಲೆಯ ಶಿಕ್ಷಕ ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಟಿ ರೇವಣ್ಣ, ದ್ರಾಕ್ಷಾಯಿಣಮ್ಮ ನಾಗರಾಜ್, ಟಿ.ರಾಜಣ್ಣ, ಲಕ್ಷ್ಮೀದೇವಿ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಡಿ.ನಾಗರಾಜ್, ಉಪಾಧ್ಯಕ್ಷರಾದ ಶಿವಾರೆಡ್ಡಿ, ಸದಸ್ಯರಾದ ಟಿ.ತಿಪ್ಪೇಸ್ವಾಮಿ, ಡಿ.ವಿಜಯ ಕುಮಾರ್, ಬಸವರಾಜು,ಡಿ.ಲಿಂಗರಾಜ್, ಶ್ರೀಕಾಂತ್, ಶ್ರೀಮತಿ ಎಸ್. ಸುಶೀಲಮ್ಮ ಇನ್ನಿತರರು ಹಾಜರಿದ್ದರು, ಆರ್.ಶಾರದಾ ಪ್ರಾರ್ಥಿಸಿದರು, ಸಹ ಶಿಕ್ಷಕರಾದ ಜಿ.ಟಿ ಬಸವರಾಜ್ ಸ್ವಾಗತಿಸಿದರು, ಜೆ.ಸುಪ್ರಿಯಾ ನಿರೂಪಿಸಿದರು,ಎಸ್ ತಿಪ್ಪಮ್ಮ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಊರಿನ ಸಮಸ್ತ ನಾಗರೀಕ ಬಂಧುಗಳು,ಮಹಿಳೆಯರು,ಯುವಕ ಯುವತಿಯರು,
ಪೋಷಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

suddionenews

Recent Posts

ಹುಬ್ಬಳ್ಳಿಯಲ್ಲಿ ಕಣ್ಣೀರುಡುತ್ತಾ ಜೈನ ಮುನಿ ಸರ್ಕಾರಕ್ಕೆ ಹೇಳಿದ್ದೇನು..?

ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…

9 hours ago

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…

10 hours ago

ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

  ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…

11 hours ago

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…

11 hours ago

ಚಿತ್ರದುರ್ಗ : ಮಾರ್ಚ್ 18 ರಿಂದ 21 ರವರೆಗೆ ಕಣಿವೆಮಾರಮ್ಮನ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago

ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ತುರುವನೂರಿನ ವಿರಾಟ್ ಆಂಜನೇಯ ಸ್ವಾಮಿ ರೇಖಾಚಿತ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago