ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 16 : ಶೈಲಾ ಸದಾಶಿವಪ್ಪ ಸಂಗಮ್ (73) ಚಳ್ಳಕೆರೆ ತಾಲ್ಲೂಕಿನ ಗಜ್ಜುಗಾನಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ 9-05 ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಮೃತರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್‍ರವರ ಚಿಕ್ಕಮ್ಮ ಶೈಲಾ ಸದಾಶಿವಪ್ಪ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗಜ್ಜುಗಾನಹಳ್ಳಿಯ ತೋಟದಲ್ಲಿ ಸೋಮವಾರ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.


