Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ | ಅಕ್ರಮವಾಗಿ ಮದ್ಯ ಮಾರಾಟ : ಗ್ರಾಮಸ್ಥರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.13 : ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಪಂಚಾಯಿತಿಗೆ ಸೇರಿದ ಮಲ್ಲಸಮುದ್ರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದನ್ನು ತಡೆಯುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಮಲ್ಲಸಮುದ್ರ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಮಲ್ಲಸಮುದ್ರ ಗ್ರಾಮ ನೆರೆಯ ಆಂಧ್ರ ಗಡಿಭಾಗಕ್ಕೆ ಸೇರಿರುವುದರಿಂದ ಆಂಧ್ರದಿಂದ ಇಲ್ಲಿಗೆ ಬಂದು ಮದ್ಯ ಸೇವಿಸಿ ದಿನವೂ ಗಲಾಟೆ ಮಾಡುವುದು ಸಾಮಾನ್ಯವಾಗಿದೆ. ಮಹಿಳೆಯರು, ಮಕ್ಕಳು ನಿರ್ಭಯವಾಗಿ ಗ್ರಾಮದಲ್ಲಿ ಓಡಾಡುವುದು ಕಷ್ಟವಾಗಿದೆ. ಪೆಟ್ಟಿಗೆ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅನೇಕ ಬಾರಿ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯರು ದೂರಿದರು.

ರೈತ ಮುಖಂಡ ಕೆ.ಪಿ.ಭೂತಯ್ಯ, ಎಂ.ಯಶೋಧ, ತಿಮ್ಮಕ್ಕ, ಕಲ್ಲಮ್ಮ, ಶಾರದಮ್ಮ, ಹೊನ್ನೂರಮ್ಮ, ನಂದಿನಿ, ನಾಗಮ್ಮ, ಶಿಲ್ಪ, ಭಾಗ್ಯಮ್ಮ, ರತ್ನಮ್ಮ, ಮಾರಕ್ಕ, ಯಲ್ಲಕ್ಕ, ಪೆನ್ನಕ್ಕ ಇನ್ನು ಮುಂತಾದವರು ಪ್ರತಿಭಟನೆಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment