Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕುರಿಮರಿಗಳ ಮೇಲೆ ಬೀದಿನಾಯಿಗಳ ದಾಳಿ : 8 ಕುರಿಗಳು ಮೃತ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ ಆ.22 : ಕುರಿ ಹಟ್ಟಿಯಲ್ಲಿದ್ದ ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ 8 ಕುರಿ ಮರಿಗಳು ಸಾವನ್ನಪ್ಪಿದ ಘಟನೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ಜಿ.ಪಿ. ರಂಗಪ್ಪ ಬಡಾವಣೆಯಲ್ಲಿ ವಾಸಿಸುತ್ತಿದ್ದ ಮಾರಣ್ಣ ಎನ್ನುವವರಿಗೆ ಸೇರಿದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.

ಇಂದು (ಗುರುವಾರ) ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಾಯಿಗಳು ಕುರಿಗಳ ಮೇಲೆ ದಾಳಿ ಮಾಡಿವೆ. ಈ ಘಟನೆಯಿಂದಾಗಿ ಕುರಿಸಾಕಾಣಿಕೆದಾರ ಮಾರಣ್ಣ ಕಂಗಾಲಾಗಿದ್ದಾನೆ. ಮೇಯಿಸಲು ಹೋದಾಗ ನರಿ, ತೋಳ ಹಾಗೂ ಚಿರತೆ ದಾಳಿ ಮಾಡುತ್ತಿದ್ದವು. ಆದರೆ ಈಗ ಅವುಗಳ‌ ಕಾಟ ತಪ್ಪಿದ್ದು ಹಗಲಿನಲ್ಲಿಯೇ ಊರಿನ‌ ಮಧ್ಯೆಯೇ ಕುರಿಗಳ ಮೇಲೆ ಬೀದಿ ನಾಯಿಗಳ ದಾಳಿ ಮಾಡಿ ಈ ರೀತಿ ಕುರಿಗಳನ್ನು ಬಲಿ ಪಡೆದರೆ ಹೇಗೆ ಎಂದು ಮಾರಣ್ಣ ನೋವು ವ್ಯಕ್ತಪಡಿಸಿದ್ದಾನೆ.

ಸಂಬಂಧಪಟ್ಟ ಅಧಿಕಾರಿಕಾರಿಗಳು ಮಾತ್ರ ಬೀದಿನಾಯಿಗಳ ಕಡಿವಾಣ ಹಾಕಲು‌ ಮುಂದಾಗುತ್ತಿಲ್ಲ. ಈಗಲಾದರು ಸಂಬಂಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳಿಗೆ ಕಡಿವಾಣ ಹಾಕಬೇಕಿದೆ. ನಾಯಿದಾಳಿಗೆ ಸಿಲುಕಿ ಮೃತಪಟ್ಟ ಕುರಿಗಳಿಗೆ ಪರಿಹಾರ ಕೊಡಿಸುವ ಮೂಲಕ ಕುರಿಸಾಕಾಣಿಕೆದಾರರ ನೆರವಿಗೆ ಬರಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...