ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 24 : ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಆಶ್ರಯದಲ್ಲಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಡಿ.29ರಂದು ಬೆಳಿಗ್ಗೆ 11 : 30 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ವಿಷಯ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಕರುನಾಡು ಜಿಯಾವುಲ್ಲಾ ತಿಳಿಸಿದ್ದಾರೆ.
ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಚಳ್ಳಕೆರೆ ಬಸವರಾಜ್ ಅವರು ಉಪನ್ಯಾಸ ನೀಡಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ದ್ರಾಕ್ಷರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬಿ.ಯೋಗೀಶ್‌ಬಾಬು, ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಸಿ.ಟಿ.ವೀರೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.