Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಭೀಕರ ಅಪಘಾತ : ಮೂವರು ಸಬ್ ಇನ್ಸ್‌ಪೆಕ್ಟರ್ ಸಾವು..!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. : ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದಾಗ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಕಾರಲ್ಲಿದ್ದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್ ಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಲ್ಲಿದ್ದವರು ಸಾವನ್ನಪ್ಪಿದ್ದಾರೆ. ಮೃತ ಅಧಿಕಾರಿಗಳನ್ನು ಮಂಜುನಾಥ್, ಅಂಬರೀಶ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ.

ಈ ಘಟನೆಯಲ್ಲಿ ಕಾರಿನಲ್ಲಿ ಇದ್ದ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಗಂಭೀರ ಗಾಯಗಳಾಗಿವೆ. ಪಿಎಸ್ಐ ಈಶ್ವರ್ ಹಾಗೂ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಾಯವಾಗಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಯನ್ನ ನೀಡುತ್ತಿದ್ದು, ಪ್ರಾಣಪಾಯಾದಿಂದ ಪಾರಾಗಿದ್ದಾರೆ. ಲಾರಿ ಬಂದು ಗುದ್ದಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಐಮಂಗಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಭಾನುವಾರ ಎಲ್ಲರು ಸೇರಿ ಒಂದೇ ಕಾರಲ್ಲಿ ಪ್ರಯಾಣ ಮಾಡಿದ್ದರು. ಯಮರಾಯ ಒಂದೇ ಸಲ ಮೂವರನ್ನ ಕರೆದುಕೊಂಡು ಹೊರಟೆ ಬಿಟ್ಟಿದ್ದಾನೆ. ಕುಟುಂಬಸ್ಥರಿಗೂ ವಿಚಾರ ತಿಳಿದು, ದುಃಖ ಅರಗಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದಾರೆ.

ಘಟನೆ ಕುರಿತು ಜಿಲ್ಲಾ ಎಸ್ಪಿ ರಂಜೀತ್ ಕುಮಾರ ಬಂಡಾರು.
ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now