ಚಳ್ಳಕೆರೆ | ಟ್ರ್ಯಾಕ್ಟರ್ – ಬೈಕ್ ನಡುವೆ ಅಪಘಾತ : ಓರ್ವ ಸಾವು

1 Min Read

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜನವರಿ. 10 : ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಸುನ೬10: 30 ರ ವೇಳೆಗೆ ನಡೆದಿದೆ.

ತಾಲೂಕಿನ ಮಲ್ಲೂರಹಟ್ಟಿ ಹಾಗೂ ನಾಯಕನಹಟ್ಟಿ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಅಪಘಾತ ನಡೆದಿದ್ದು ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಬೈಕಿನ ಹಿಂಬದಿಯಲ್ಲಿ ಕುಳಿತಿದ್ದ ಓಬಳೇಶ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Share This Article
Enable Notifications OK No thanks