Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಟ್ಯಾಕ್ಟರ್ ಪಲ್ಟಿ : 20 ಜನರಿಗೆ ಗಾಯ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ,
ಮೊ : 9739875729

ಸುದ್ದಿಒನ್, ಚಳ್ಳಕೆರೆ, ಜೂನ್. 08 : ಮದುವೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮದಿಂದ ಜಗಳೂರು ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಹೋಗಿ ಮದುವೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ನಾಯಕನಹಟ್ಟಿ ಜಾಗನೂರಹಟ್ಟಿ ಸಮೀಪ ಹಳ್ಳದಲ್ಲಿ ಟ್ಯಾಕ್ಟರ್ ಪಲ್ಟಿ ಹೋಡೆದಿದೆ. ಟ್ಯಾಕ್ಟರ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಯಕನಹಟ್ಟಿ ಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...