ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಜನವರಿ. 03 : ಚಲಿಸುತ್ತಿದ್ದ ಟ್ರಾಕ್ಟರ್ ನ ಟೈರ್ ಸ್ಪೋಟವಾಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪುದ್ದು ಇಬ್ಬರಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ಮೈಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತನನ್ನು ರೇಣುಕಾಪುರ ಗ್ರಾಮದ ನಿವಾಸಿ ಶಂಕರನಾಗ್ (38 ವರ್ಷ) ಎಂದು ಗುರುತಿಸಲಾಗಿದೆ. ಟ್ರಾಕ್ಟರ್ ನಲ್ಲಿದ್ದ ಆಂಧ್ರ ಮೂಲದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರಾಕ್ಟರ್ ನಲ್ಲಿ ಕಡಪ ಕಲ್ಲು ತುಂಬಿ ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ತಳಕು PSI ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.