Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಸಾಲುಮರದ ತಿಮ್ಮಕ್ಕನವರಿಗೆ ಶ್ರದ್ಧಾಂಜಲಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಚಳ್ಳಕೆರೆ. ನ. 15 : ಸಾಲುಮರದ ತಿಮ್ಮಕ್ಕ  ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ  ಹಲವು ಜಾತಿಯ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದರವರು ಅವರ ನೆನಪುಗಾಗಿ ನಮ್ಮ ಶಾಲಾ ಆವರಣದಲ್ಲಿ ಇಂದು ಸಸಿಗಳನ್ನ ನೆಡಲಾಗಿದೆ ಎಂದು ಹೊಂಗಿರಣ ಶಾಲೆಯ ಕಾರ್ಯದರ್ಶಿ ದಯಾನಂದ ಪ್ರಹ್ಲಾದ್ ಹೇಳಿದರು.

ನಿನ್ನೆ ನಿಧನರಾದ ಸಾಲುಮರದ ತಿಮ್ಮಕ್ಕರವರ ನೆನಪಿಗಾಗಿ  ಹೊಂಗಿರಣ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿ.,ಸಾಲು ಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿ ಕಿರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಸಾಹಿತಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ,
ಪರಿಸರ ಎಂದರೆ ಕರ್ನಾಟಕದಲ್ಲಿ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ವೃಕ್ಷಮಾತೆ ಎಂದು ಸಹ ಇವರನ್ನು ಕರೆಯುತ್ತಾರೆ. ವರ್ಷಗಳ ಹಿಂದೆ ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು.ಮದುವೆಯಾಗಿ ಅದೆಷ್ಟೋ ವರ್ಷಗಳಾದರೂ ತಿಮ್ಮಕ್ಕ ಅವರಿಗೆ ಮಕ್ಕಳಾಗಿರಲ್ಲಿಲ್ಲ. ಹೀಗಾಗಿ ತಿಮ್ಮಕ್ಕ ಮಕ್ಕಳಿಲ್ಲದ ದುಃಖವನ್ನು ಮರೆಯಲು ರಸ್ತೆಯ ಬದಿಗಳಲ್ಲಿ ಆಲದ ಸಸಿಗಳನ್ನು ನೆಡಲು ಆರಂಭಿಸಿದರು. ಕುದೂರಿನಿಂದ ಹುಲಿಕಲ್ ತನಕ ಇರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕರವರು ಆಲದ ಸಸಿಗಳನ್ನು ನೆಟ್ಟು ಪೋಷಣೆ ಮಾಡಿದ್ದರು ಅವರು ಅಂದು ಪೋಷಣೆ ಮಾಡಿ ಬೆಳೆಸಿದ ಗಿಡಗಳು ಹೆಮ್ಮಾರವಾಗಿ ಬೆಳದಿವೆ ಅವರು ಇಂದು ನಮ್ಮೊಂದಿಗೆ ಅವರ ನೆನಪಿಗಾಗಿ ಇಂದು ಈ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿರುವುವು ಮೂಲಕ ಸಾಲು ಮರದ ತಿಮ್ಮಕ್ಕ ವೃಕ್ಷ ಮಾತೆಯ ನೆನಪು ಸದಾ ಇರಲಿ ಎಂದರು.

ಈ ಕಾರ್ಯ ಕ್ರಮದಲ್ಲಿ ಶಾಲೆಯ ನಿರ್ದೇಶಕ ಶಿವಪ್ರಸಾದ್, ಮುಖ್ಯ ಶಿಕ್ಷಕ ಡಿವಿಎಸ್ ಪ್ರಸಾದ್, ಶಿಕ್ಷಕಿ ಶೈಲಜ,ಫಯಾಜ್, ಹಾಗೂ ಶಿಕ್ಷಕ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳಾದ ತಿಪ್ಪಣ್ಣ, ವಿದ್ಯಾರ್ಥಿ ಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...