Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳ ಕೋಲಾಹಲ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜುಲೈ. 28 : ನಗರದಲ್ಲಿ ನಿರ್ಮಾಣಗೊಂಡಿರುವ ಜಿ ಪ್ಲಸ್ ಟು ಮನೆಗಳು ವಾಸಿಸಲು ಯೋಗ್ಯವಾಗಿಲ್ಲ. ಅಲ್ಲದೆ 2003ರಲ್ಲಿ ಹಿಂದಿನ ಶಾಸಕ ತಿಪ್ಪೇಸ್ವಾಮಿಯವರು 198 ಫಲಾನುಭವಿಗಳಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ನಗರಸಭೆ ಅಧಿಕಾರಿಗಳು ಅವರಿಗೆ ಜಿ ಪ್ಲಸ್ ಟು ಮನೆಗಳನ್ನು ನೀಡದೆ ನಿವೇಶನವನ್ನು ನೀಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಒತ್ತಾಯಿಸಿದರು.

ನಗರದ ನಗರಸಭೆ ಆವರಣದಲ್ಲಿ ಅಧ್ಯಕ್ಷೆ ಶಿಲ್ಪ ರವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ವಿಷಯ ಚರ್ಚೆಗೆ ಬಂದಾಗ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಕೋಲಾಹಲ ಸೃಷ್ಟಿಯಾಯಿತು.

ವಿರೋಧ ಪಕ್ಷದ ಸದಸ್ಯರಾದ ವಿ ವೈ ಪ್ರಮೋದ್, ಶ್ರೀನಿವಾಸ್ ಹಾಗೂ ಜಯಣ್ಣ ಮಾತನಾಡಿ ಹಿಂದಿನ ಶಾಸಕರ ಆದೇಶವನ್ನು ಪಾಲನೆ ಮಾಡಿ 198 ಪಲಾನುಭವಿಗಳಿಗೆ ನಿವೇಶನಗಳನ್ನು ನೀಡಬೇಕು ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದಾಗ, ಆಡಳಿತ ಪಕ್ಷದ ಸದಸ್ಯ ವೀರಭದ್ರಪ್ಪ ಮಧ್ಯಪ್ರವೇಶಸಿ ಈ ಹಿಂದೆ ಅರ್ಜಿ ಸಲ್ಲಿಸಿದ್ದ 198 ಅಲಾನುಭವಿಗಳಿಗೆ ನಿವೇಶನ ನೀಡಲು ಸಾಧ್ಯವಿಲ್ಲದ ಕಾರಣ ಅದರ ಬದಲಿಗೆ ಜಿ ಪ್ಲಸ್ ಟು ಮನೆಗಳಲ್ಲಿ ಕೆಳಗಿನ ಮನೆಗಳನ್ನು ಅವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಆದರೆ ಇದಕ್ಕೆ ಪಟ್ಟು ಸಡಿಲಿಸದ ವಿರೋಧ ಪಕ್ಷದ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ನಗರಸಭೆ ಅಧಿಕಾರಿ ಭೂತಯ್ಯ 2016 ರಿಂದ ಸಾರ್ವಜನಿಕರಿಗೆ ನಿವೇಶನ ನೀಡುವುದನ್ನು ಸರ್ಕಾರದ ನಿಯಮಾವಳಿ ರದ್ದುಗೊಂಡಿರುವುದರಿಂದ ನಿವೇಶನ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜಿ ಪ್ಲಸ್ ಟು ಮನೆಗಳ ನಿರ್ಮಾಣ ಮಾಡಿ ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜಿ ಪ್ಲಸ್ ಟು ಮನೆಗಳಿಗೆ ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ ವಾರ್ಡ್ಗಳಲ್ಲಿ ಅರಿವು ಮೂಡಿಸುವಂತೆ ಜನಪ್ರತಿನಿಧಿಗಳಿಗೆ ತಿಳಿಸಿದರು.

ಸರ್ಕಾರದ ಸುತ್ತೋಲೆಯ ಪ್ರಕಾರ ನಗರ ಸಭೆಗಳಲ್ಲಿ ಮೂರು ಸ್ಥಾಯಿ ಸಮಿತಿಗಳನ್ನು ರಚಿಸಲು ಸಭೆಯಲ್ಲಿ ಮಂಡಿಸಿದಾಗ ವಿರೋಧ ಪಕ್ಷದ ಸದಸ್ಯ ಜಯಣ್ಣ ಮಾತನಾಡಿ ನಗರದಲ್ಲಿ ನಗರಸಭೆ ಕಟ್ಟಡ ಪೂರ್ಣಗೊಳ್ಳದೆ ಗಿಡಗಂಟೆಗಳು ಬೆಳೆಯುವ ಸ್ಥಳವಾಗಿ ಮಾರ್ಪಟ್ಟಿದೆ. ಸ್ಥಾಯಿ ಸಮಿತಿ ರಚನೆ ಮಾಡಿದರೆ ನಗರಸಭೆಯಲ್ಲಿ ಸದಸ್ಯರಿಗೆ ಕುಳಿತುಕೊಳ್ಳಲು ಸಹ ಜಾಗವಿಲ್ಲದಂತಾಗುತ್ತದೆ. ಕೇವಲ ಇನ್ನೆರಡು ತಿಂಗಳು ನಗರಸಭೆ ಸದಸ್ಯರಿಗೆ ಅಧಿಕಾರವಿದ್ದು ಆದ್ದರಿಂದ ಸ್ಥಾಯಿ ಸಮಿತಿಗಳನ್ನು ರಚಿಸುವ ಅಗತ್ಯವು ಇಲ್ಲ ಹಾಗೂ ಅವಶ್ಯಕತೆಯೂ ಇಲ್ಲ ಎಂದು ಕಿಡಿಕಾರಿದರು.

ಜಾಹಿರಾತು ಫಲಕ ಅಳವಡಿಸಲು ನಿರ್ಮಾಣವಾಗಿರುವ ಕಂಬ ತರವಿಗೆ ಸದಸ್ಯರ ತೀರ್ಮಾನ: ನಗರದ ನೆಹರು ವೃತ್ತದಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ನಿರ್ಮಾಣಗೊಂಡಿರುವ ಕಂಬಗಳನ್ನು ಕೂಡಲೇ ತೆರವುಗೊಳಿಸುವಂತೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪ ಉಪಾಧ್ಯಕ್ಷೆ ಕವಿತಾ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಪೌರಾಯುಕ್ತ ಜಗರೆಡ್ಡಿ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...