ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಆಗಸ್ಟ್.10 : ತಾಲೂಕಿನ ಬುಡ್ನಟ್ಟಿ ಗ್ರಾಮದಲ್ಲಿ ವಿಷದ ಹಾವೊಂದು ಕಡಿದ ಪರಿಣಾಮವಾಗಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತನನ್ನು 23 ವರ್ಷದ ಬಂಗಾರಿ ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ಗ್ರಾಮದಲ್ಲಿ ಯುವಕನಿಗೆ ಹಾವು ಕಚ್ಚಿದ್ದು ಕೂಡಲೇ ಆತನನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಯುವಕ ಮೃತ ಪಟ್ಟಿದ್ದಾನೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















