ಹೊಸ ವರ್ಷಾಚರಣೆ ಚಾಮುಂಡಿ ಬೆಟ್ಟಕ್ಕೆ ನಿಷೇಧ..!

suddionenews
1 Min Read

2023 ಕಳೆಯುತ್ತಿದೆ. 2024ಕ್ಕೆ ಕಾಲಿಡುತ್ತಿದ್ದೇವೆ. ಇಂಥ ಸಮಯದಲ್ಲಿ ಒಂದಷ್ಟು ಹೊಸ ಗುರಿಗಳನ್ನು ಹೊಂದುತ್ತೇವೆ. ಒಂದಷ್ಟು ಹೊಸ ರೆಸುಲೇಷನ್ಸ್ ಗಳನ್ನು ಹಾಕಿಕೊಳ್ಳುತ್ತೇವೆ. ಹೊಸ ವರ್ಷ ಅಲ್ವಾ, ಹೀಗಾಗಿ ದೇವರ ಆಶೀರ್ವಾದ ಪಡೆಯುವುದಕ್ಕೂ ಜನ ಮುಂದೆ ಇರುತ್ತಾರೆ. ಅದರಲ್ಲೂ ತಾಯಿ ಚಾಮುಂಡಿ ದರ್ಶನ ಪಡೆಯುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ ಈ ಬಾರಿಯ ಹೊಸ ವರ್ಷಕ್ಕೆ ತಾಯಿಯ ದರ್ಶನ ಸಿಗುವುದು ಕಷ್ಟವಾಗಿದೆ.

 

ಡಿಸೆಂಬರ್ 31ರ ಸಂಜೆ 7 ಗಂಟೆಯ ಮೇಲೆ ಚಾಮುಂಡಿ ಬೆಟ್ಟಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾತನಾಡಿ, ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಮಧ್ಯರಾತ್ರಿ 1 ಗಂಟೆಯವರೆಗೂ ಅವಕಾಶ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಿಗದಿ ಮಾಡಿರುವ ಸಮಯವನ್ನು ಪಾಲನೆ ಮಾಡಬೇಕು ಎಂದಿದ್ದಾರೆ. ಹೋಂ ಸ್ಟೇ, ರೆಸಾರ್ಟ್ಸ್, ಪಬ್ ಗಳು ಸೇರಿದಂತೆ ಹೊಟೇಲ್ ಗಳಿಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

 

ಅಸಭ್ಯ ವರ್ತನೆ ತಡೆಯಲು 36 ವಿಶೇಷ ಕಾರ್ಯಪಡೆ ತಂಡ ರಚನೆ ಮಾಡಲಾಗಿದೆ. ಇನ್ನು ಮಹಿಳೆಯರ ಸುರಕ್ಷೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ ರಚಿಸಲಾಗಿದೆ. ಪ್ರಮುಖ ಸ್ಥಳದಲ್ಲಿ ಶ್ವಾನದಳ, ವಿದ್ವಂಸಕ ಕೃತ್ಯ ತಡೆಗಾಗಿ 4 ತಂಡ ರಚನೆ ಮಾಡಲಾಗಿದೆ. ಮೈಸೂರು ನಗರದಲ್ಲಿ 275 ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ರಿಂಗ್ ರೋಡ್‌ನಲ್ಲಿ 8 ಹೈವೇ ಪೆಟ್ರೋಲ್ ವಾಹನ ನಿಯೋಜನೆ ಮಾಡಲಾಗುತ್ತದೆ. ಮೈಸೂರು ನಗರದ ಹೊರವಲಯದಲ್ಲಿ 12 ಕಡೆ ಚೆಕ್​​ಪೋಸ್ಟ್​​ ನಿರ್ಮಿಸಲಾಗುತ್ತದೆ. 18 ಕಡೆ ಚೆಕ್​ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ಮೇಲೆ ತೀವ್ರಾ ನಿಗಾ ವಹಿಸಲಾಗುತ್ತೆ. ಹೊಸ ವರ್ಷಾಚರಣೆ ಕಾರ್ಯಕ್ರಮ ಆಯೋಜನೆಗೆ ಅನುಮತಿ ಕಡ್ಡಾಯವಾಗಿದೆ. ಧ್ವನಿವರ್ಧಕ ಅಳವಡಿಸುವುದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಬೇಕು. ಕಾರ್ಯಕ್ರಮದ ನೆಪದಲ್ಲಿ ಮಾದಕ ವಸ್ತುಗಳ ಸೇವನೆ, ಜೂಜಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *