Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಪಗ್ರಹ ಉಡಾವಣೆ ನೋಡುವ ಅವಕಾಶ : ನೋಂದಣಿಗೆ ಸೆಪ್ಟೆಂಬರ್ 10 ಕೊನೆಯ ದಿನ

Facebook
Twitter
Telegram
WhatsApp

 

ಚಿತ್ರದುರ್ಗ,(ಸೆಪ್ಟೆಂಬರ್.06):  75ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ, ದೇಶಾದ್ಯಂತ ವಿದ್ಯಾರ್ಥಿಗಳು ತಯಾರಿಸಿರುವ 75 ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದ್ದು, ನಮ್ಮ ರಾಜ್ಯದಲ್ಲಿ “ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಗ್ರಹ-ಕೆಜಿಎಸ್ 3 ಸ್ಯಾಟ್” ಯೋಜನೆಯಲ್ಲಿ ನಿರ್ಮಾಣಗೊಳ್ಳುವ ಉಪಗ್ರಹವನ್ನು ಪುನೀತ ಉಪಗ್ರಹ ಎಂದು ಕರೆಯಲಾಗಿದೆ.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (KSTePS)  ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (KSCST) ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ (ISRO) ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ (ITCA)  ಈ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುತ್ತಿದೆ.

ಪುನೀತ ಉಪಗ್ರಹ (KGS3Sat)  ಉಡಾವಣೆಯ ವಿದ್ಯಾರ್ಥಿ ಕೇಂದ್ರಿತ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಶ್ರೀಹರಿಕೋಟಾದಲ್ಲಿ ಉಪಗ್ರಹ ಉಡಾವಣೆಯನ್ನು ವೀಕ್ಷಿಸುವ ಅವಕಾಶ ಪಡೆಯಬಹುದು. ಈ ಅವಕಾಶವನ್ನು ಪಡೆಯಲು, ಸ್ಪರ್ಧೆಗಳಲ್ಲಿ ಹೆಸರು ನೋಂದಾಯಿಸಿಕೊಂಡು ಭಾಗವಹಿಸಬೇಕು.
ನೋಂದಣೆ ಹೇಗೆ: ಪ್ರೌಢಶಾಲಾ ವಿದ್ಯಾರ್ಥಿಗಳಾದ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಆನ್‍ಲೈನ್ ರಸಪ್ರಶ್ನೆ, ವಿಜ್ಞಾನ ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಲು Google forms: https://forms.gle/GaSmj3ieeggWYRKH6 ನಲ್ಲಿ ನೊಂದಾಯಿಸಿಕೊಳ್ಳಬೇಕು.

ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ, ಖಗೋಳಶಾಸ್ತ್ರ ಕುರಿತು ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು Google forms:
https://forms.gle/x4zWiqVXofZ9QBD97

ನಲ್ಲಿ ನೊಂದಾಯಿಸಿಕೊಳ್ಳಬಹುದು. ನೋಂದಣೆಗೆ ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!