Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದನ್ ಶೆಟ್ಟಿ ಎರಡನೇ ಮದುವೆ ಸುಳಿವು: ಯಾವಾಗ ಹಸೆಮಣೆ ಏರುತ್ತಾರೆ ?

---Advertisement---

ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಹಿಂದೆ ನಿವೇದಿತಾ ಗೌಡರನ್ನು ಮದುವೆಯಾಗಿದ್ದರು. ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಆರಂಭವಾದ ಇವರ ಪರಿಚಯ ಹಸೆಮಣೆವರೆಗೆ ಸಾಗಿತ್ತು. ಆದರೆ ಮದುವೆಯಾದ ಕೆಲವೇ ವರ್ಷಗಳಲ್ಲಿ ಇಬ್ಬರೂ ಬೇರ್ಪಟ್ಟಿದ್ದು, ಈಗ ತಮತಮ ಜೀವನದಲ್ಲಿ ಮುಂದುವರಿಯುತ್ತಿದ್ದಾರೆ.

ಇದೀಗ ಚಂದನ್ ಶೆಟ್ಟಿ ತಮ್ಮ ಎರಡನೇ ಮದುವೆ ಕುರಿತು ಮಾತನಾಡಿ, ವಿವಾಹದ ಸಮಯದ ಬಗ್ಗೆ ಸುಳಿವು ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಲ್ಲಿ ವಿಚ್ಛೇದನ ಸಾಮಾನ್ಯವಾಗುತ್ತಿರುವ ಹಿನ್ನೆಲೆಯಲ್ಲಿ, ಈ ವಿಷಯವನ್ನು ಸೆಲೆಬ್ರಿಟಿಗಳು ತೆರೆಯಾಗಿ ಹಂಚಿಕೊಳ್ಳುತ್ತಿದ್ದಾರೆ. ಚಂದನ್ ಮತ್ತು ನಿವೇದಿತಾ ಕೂಡ ವಿಚ್ಛೇದನದ ಬಳಿಕ ಸುದ್ದಿಗೋಷ್ಠಿ ನಡೆಸಿ, ಹೊಂದಾಣಿಕೆಯ ಕೊರತೆಯೇ ಬೇರ್ಪಟ್ಟ ಕಾರಣ ಎಂದು ಸ್ಪಷ್ಟಪಡಿಸಿದ್ದರು.

ಒಂದು ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಚಂದನ್, “ಹೌದು, ನಾನು ಮತ್ತೆ ಮದುವೆಯಾಗುತ್ತೇನೆ. ಆದರೆ ಈ ವರ್ಷ ಅಲ್ಲ. ಒಳ್ಳೆಯ ಹುಡುಗಿಯನ್ನು ಕಂಡು ಮುಂದಿನ ವರ್ಷ ಮದುವೆಯಾಗುವ ಯೋಜನೆ ಇದೆ. ಇನ್ನೂ ಹುಡುಗಿ ಹುಡುಕುವ ಪ್ರಕ್ರಿಯೆ ಪ್ರಾರಂಭವಾಗಿಲ್ಲ” ಎಂದು ತಿಳಿಸಿದ್ದಾರೆ.ಇದಲ್ಲದೆ, “ವೈಬ್ ಮ್ಯಾಚ್ ಆದ್ರೆ ಸಾಕು. ಈ ಬಗ್ಗೆ ಈಗ ಹೆಚ್ಚಿನದಾಗಿ ಹೇಳಲು ಇಷ್ಟವಿಲ್ಲ. ಮುಂದಿನ ವರ್ಷ ಮಾತನಾಡುತ್ತೇನೆ” ಎಂದೂ ಹೇಳಿದ್ದಾರೆ. ಈ ಮೂಲಕ 2027ರ ವೇಳೆಗೆ ಚಂದನ್ ಶೆಟ್ಟಿ ಎರಡನೇ ಬಾರಿ ಮದುವೆಯಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನೊಂದೆಡೆ, ಚಂದನ್ ಶೆಟ್ಟಿ ಅಭಿನಯಿಸಿರುವ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರ ಏಪ್ರಿಲ್ 24ರಂದು ತೆರೆಗೆ ಬರುತ್ತಿದ್ದು, ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now