Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿರುವುದರ ಹಿಂದೆ ಚಂದ್ರಪ್ಪನವರ ಅಪಾರ ಪರಿಶ್ರಮವಿದೆ : ಡಾ.ಬಿ.ಕೆ.ರವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 14 : ಪ್ರಜಾಸತ್ತಾತ್ಮಕ, ಅಸಮಾನತೆ ವ್ಯವಸ್ಥೆಯಲ್ಲಿ ಕಠಿಣ ಪರಿಶ್ರಮದಿಂದ ಮಾತ್ರ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಕೆ.ರವಿ ಪದವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳಲ್ಲಿ 2024-25 ನೇ ಸಾಲಿನಲ್ಲಿ ಪದವಿ ಪಡೆದಿರುವ 600 ವಿದ್ಯಾರ್ಥಿಗಳಿಗೆ ಪರಿಣಿತ್-2025 ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ ವ್ಯವಸ್ಥೆ, ಶ್ರೇಣಿಕೃತ ವರ್ಗ ಸಂಘರ್ಷದ ಹೋರಾಟದಲ್ಲಿ ಸಮ ಸಮಾಜದ ಬೀಜ ಬಿತ್ತಿದ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸುರವರ ಹೆಸರಿನಲ್ಲಿ ಶಾಸಕ ಡಾ.ಎಂ.ಚಂದ್ರಪ್ಪನವರು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿರುವುದರ ಹಿಂದೆ ಅಪಾರ ಪರಿಶ್ರಮವಿದೆ. ಪ್ರತಿಭೆಗಳನ್ನು ಬೆನ್ನು ತಟ್ಟುವ ಕೆಲಸ ಈ ಸಂಸ್ಥೆ ಮಾಡುತ್ತಿದೆ ಎಂದು ಪ್ರಶಂಶಿಸಿದರು.

ಬಯಲು ಸೀಮೆ ಚಿತ್ರದುರ್ಗದಲ್ಲಿ ಶೋಷಿತ ಬಡತನದ ಬೇಗೆಯಲ್ಲಿ ಬೇಯುವ ವರ್ಗವೆ ಜಾಸ್ತಿ. ಅದಕ್ಕಾಗಿ ಇಲ್ಲಿನ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಬೇಕೆಂಬ ಮಹದಾಸೆಯಿಂದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಕಟ್ಟುವುದರ ಜೊತೆಗೆ ಜನಪ್ರಿಯ ಶಾಸಕರಾಗಿ ಡಾ.ಎಂ.ಚಂದ್ರಪ್ಪ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣದಿಂದ ಮಾತ್ರ ಜೀವನ ಕಟ್ಟಿಕೊಳ್ಳಬಹುದು ಎಂದು ಪದವಿ ಪಡೆದವರಿಗೆ ಕರೆ ನೀಡಿದರು.

ವಿನಯ, ವಿಧೇಯತೆ, ಕಠಿಣ ಪರಿಶ್ರಮ, ಗುರು ತೋರಿದ ಮಾರ್ಗದ ಜೊತೆ ತಂದೆ-ತಾಯಿ ಆಶೀರ್ವಾದ ನಿಮ್ಮ ಕೈಹಿಡಿಯುತ್ತದೆ. ನ್ಯಾಯ ನೀತಿ ಧರ್ಮ ಪಾಲಿಸಿ. ಅಧರ್ಮದ ದಾರಿ ಹಿಡಿಯಬೇಡಿ ಎಂದು ವಿದ್ಯಾರ್ಥಿಗಳಿಗೆ ಬುದ್ದಿಮಾತು ಹೇಳಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡುತ್ತ 22 ಸಾವಿರ ಮಕ್ಕಳು ಇದುವರೆವಿಗೂ ನಮ್ಮ ಕಾಲೇಜಿನಿಂದ ಪದವಿ ಪಡೆದು ಹೊರ ಹೋಗಿದ್ದಾರೆ. ಪದವಿಯ ಜೊತೆ ಕೌಶಲ್ಯ ಶಿಕ್ಷಣ ಬೇಕು. ಎಂಬತ್ತು ಸಾವಿರಕ್ಕಿಂತ ಹೆಚ್ಚು ಮಕ್ಕಳಿಗೆ ಶಿಕ್ಷಣ ಕೊಟ್ಟಿದ್ದೇವೆ. ಯಾವುದೇ ಆಸೆ ಆಮಿಷವಿಲ್ಲದೆ ನಿಸ್ವಾರ್ಥವಾಗಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕೊಡಬೇಕೆಂಬುದು ನಮ್ಮ ಸಂಸ್ಥೆಯ ಧ್ಯೇಯ. 346 ಕೊಠಡಿಗಳಿರುವ ಈ ಸಂಸ್ಥೆಯಲ್ಲಿ ಬೋಧಕ ಮತ್ತು ಬೋಧಕೇತರರು ಸೇರಿ 524 ಸಿಬ್ಬಂದಿಗಳಿದ್ದಾರೆ. ಅವರೆಲ್ಲರ ಕಷ್ಟ-ಸುಖಕ್ಕೆ ಸ್ಪಂದಿಸುತ್ತಿದ್ದೇವೆಂದರು.

ಶಿಕ್ಷಣದ ಜೊತೆ ಮಕ್ಕಳಿಗೆ ಸಂಸ್ಕಾರ ಕಲಿಸಿ ಗುರು-ಹಿರಿಯರನ್ನು ಗೌರವಿಸುವ ನಾಗರೀಕ ಪ್ರಜೆಗಳನ್ನಾಗಿ ರೂಪಿಸುವುದು ನಮ್ಮ ಸಂಸ್ಥೆಯ ಉದ್ದೇಶ ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ಮಾತನಾಡಿ ಶಾಸಕ ಡಾ.ಎಂ.ಚಂದ್ರಪ್ಪನವರ ಕಠಿಣ ಪರಿಶ್ರಮದಿಂದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ದೊಡ್ಡ ಹೆಮ್ಮರವಾಗಿ ಬೆಳೆದಿದೆ. ಜೀವನದಲ್ಲಿ ಉತ್ತುಂಗ ಸ್ಥಾನಕ್ಕೆ ಏರಬೇಕಾದರೆ ಏಕಾಗ್ರತೆ, ಕಠಿಣ ಪರಿಶ್ರಮವಿರಬೇಕು. ಸಂವಹನದ ಕೊರತೆಯನ್ನು ಇಂದಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಯಾವುದೇ ಒಂದು ಭಾಷೆಯ ಮೇಲೆ ಸಂಪೂರ್ಣವಾಗಿ ಹಿಡಿತ ಸಾಧಿಸಿದಾಗ ಮಾತ್ರ ನಿಮ್ಮ ಶಿಕ್ಷಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಅನೇಕ ಯೋಜನೆಗಳಿವೆ ಪದವಿ ಪಡೆದು ಸರ್ಕಾರಿ ಉದ್ಯೋಗಕ್ಕಾಗಿ ಕಾಯುವ ಬದಲು ದೊಡ್ಡ ಉದ್ಯಮಿಗಳಾಗಿ, ಬಿಸ್ನೆಸ್‍ಮನ್‍ಗಳಾಗಿ ಬೆಳೆಯಬಹುದು. ಬಹುರಾಷ್ಟ್ರೀಯ ಕಂಪನಿಗಳ ಪ್ರವೇಶವಾಗುತ್ತಿರುವುದರಿಂದ ಸಾಫ್ಟ್‍ವೇರ್‍ನಲ್ಲಿಯೂ ಉದ್ಯೋಗ ಕಡಿಮೆಯಾಗುತ್ತಿದೆ. ಸಾಧನೆ ಮಾಡಬೇಕೆಂದರೆ ಹಿರಿಯರ, ಶಿಕ್ಷಕರ, ಪೋಷಕರುಗಳ ಮಾರ್ಗದರ್ಶನದಂತೆ ನಡೆಯಿರಿ ಎಂದು ಪದವಿ ಪಡೆದ ವಿದ್ಯಾರ್ಥಿಗಳಿಗೆ ತಿಳಿಸಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಮಾತನಾಡುತ್ತ ಪದವಿ ಜೊತೆಗೆ ಕೌಶಲ್ಯ ಶಿಕ್ಷಣ ಪಡೆದಾಗ ಮಾತ್ರ ನೀವುಗಳು ಪಡೆದಿರುವ ಪದವಿಗೆ ಮೌಲ್ಯ ಸಿಕ್ಕಂತಾಗುತ್ತದೆ. ಕೌಶಲ್ಯವಿಲ್ಲದ ಶಿಕ್ಷಣ ಪಡೆದುಕೊಳ್ಳುವುದೆಂದರೆ ನಿಮಗೆ ನೀವೇ ಮಾಡಿಕೊಳ್ಳುವ ವಂಚನೆ. ಐದುನೂರು ವಿದ್ಯಾರ್ಥಿಗಳು ಪದವಿ ಪಡೆದುಕೊಂಡಿದ್ದಾರೆ. ಕ್ರಿಯಾ ಯೋಜನೆಯನ್ನು ನಮ್ಮ ಸಂಸ್ಥೆಯಲ್ಲಿ ಆರಂಭಿಸಿದ್ದೇವೆ. ಜಿಲ್ಲೆಯಲ್ಲಿಯೇ ಎಲ್ಲಿಯೂ ಇಂತಹ ಅವಕಾಶ ವಿದ್ಯಾರ್ಥಿಗಳಿಗಿಲ್ಲ. ಮುಂದಿನ ವರ್ಷದಿಂದ ಪದವಿ ಪಡೆದವರ ಕೈಗೆ ಉದ್ಯೋಗವನ್ನು ಕೊಟ್ಟು ಕಳಿಸುತ್ತೇವೆಂದು ಹೇಳಿದರು.

ಕ್ರಿಯಾ ಸಾಫ್ಟ್ ಸ್ಕಿಲ್ ತರಬೇತಿ ಕೇಂದ್ರ ಹೈದರಾಬಾದ್‍ನ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಿ. ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಇಂದು ಈ ಮಟ್ಟಕ್ಕೆ ಬೆಳೆದು ನಿಂತಿದೆಯೆಂದರೆ ಅದಕ್ಕೆ ನಮ್ಮ ತಂದೆ ಶಾಸಕ ಡಾ.ಎಂ.ಚಂದ್ರಪ್ಪನವರ ಪರಿಶ್ರಮವಿದೆ. ಬಡ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕೊಡಬೇಕೆಂಬ ಮಹದಾಸೆಯಿಂದ ಆರಂಭಿಸಿರುವ ಈ ಸಂಸ್ಥೆಯಲ್ಲಿ ಐದು ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆಂದರು.

ಬೆಸ್ಟ್ ಅಕಾಡೆಮಿ ವಿದ್ಯಾರ್ಥಿಯೊಬ್ಬನಿಗೆ ತಾತ ಮಸಿಯಪ್ಪನವರ ಹೆಸರಿನಲ್ಲಿ ಗೋಲ್ಡ್ ಮೆಡಲ್ ಹಾಗೂ ಐವತ್ತು ಸಾವಿರ ನಗದು ನೀಡಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಹೆಚ್. ಅಧ್ಯಕ್ಷೆ ಎಂ.ಸಿ.ಯಶಸ್ವಿನಿ, ಡೀನ್ ಡಾ.ಬಿ.ಸಿ.ಅನಂತರಾಮು, ವಿವಿಧ ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕರುಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now