Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರಶೇಖರ್ ಸ್ವಾಮೀಜಿ ವರ್ಸಸ್ ಸಚಿವ ರಾಜಣ್ಣ : ತಾರಕ್ಕೇರಿದ ಮಾತುಗಳು..!

---Advertisement---

 

ತುಮಕೂರು: ನಿನ್ನೆ ಕೆಂಪೇಗೌಡ ಜಯಂತಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಹುದ್ದೆಯ ಬಗ್ಗೆ ಮಾತನಾಡಿದ್ದರು. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಲುವಂತೆ ಸಿದ್ದರಾಮಯ್ಯ ಅವರ ಬಳಿ ತುಂಬಿದ ವೇದಿಕೆಯಲ್ಲಿ ಮನವಿ ಮಾಡಿದ್ದರು. ಅದೀಗ ಸಿದ್ದರಾಮಯ್ಯ ಬಣದಲ್ಲಿ ಬಾರೀ ಚರ್ಚೆಯಾಗಿದ್ದು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ವಾಮೀಜಿ ವಿರುದ್ಧ ಆಕ್ರೋಶಗೊಂಡಿದ್ದಾರೆ‌.

‘ದೇಶದಲ್ಲಿ ಬಹಳ ಜನ ಸ್ವಾಮೀಜಿಗಳು ಇದ್ದಾರೆ. ನನಗೆ ಮಠ ಮಾಡಿಕೊಡುತ್ತೀನಿ ಅಂತ ಒಳ್ಳೆಯ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ನಾನು ಪರಿಶೀಲನೆ ಮಾಡ್ತೀನಿ. ಬೆವರು ಸುರಿಸದೆ ಜೀವನ ಮಾಡುವಂತಹ ಸ್ವಾಮೀಜಿಗಳು ಸಲಹೆ ನೀಡಿದ್ದಾರೆ. ಅದನ್ನು ನಾನು ಪರಿಶೀಲನೆ ಮಾಡ್ತೀನಿ. ಸ್ವಾಮೀಜಿ ಸುಲಭವಾಗಿ ಜೀವನ ನಡೆಸುವ ಮಾರ್ಗ ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ‌. ನಾವೂ ನೋಡಿದ ಸ್ವಾಮೀಜಿ ಸಮಾಜಕ್ಕೆ ಒಳಿತನ್ನು ಬಯಸುವವರು. ಆದರೆ ಹೀಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಸರಿಯಲ್ಲ ಎಂದು ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ರಾಜಣ್ಣ ಅವರ ಬಗ್ಗೆ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದು ಹೀಗೆ, ರಾಜಣ್ಣ ಆತ್ಮಪೂರ್ತಿಯಾಗಿ ಹೆಂಡತಿ, ಮನೆ, ಮಕ್ಕಳು ಎಲ್ಲವನ್ನು ಬಿಟ್ಟು ಬಂದರೆ ಅವರಿಗೊಂದು ಮಠ ಮಾಡಿಕೊಡುವುದು ನಮ್ಮ ಜವಾಬ್ದಾರಿ. ಆಯ್ತು ಅದನ್ನು ಪೀಠವನ್ನು ಕೊಡ್ತೀನಿ. ಅವರು, ತರ್ಲೆ, ಅವರ ಮಾತಲ್ಲಿ ತೂಕ ಇಲ್ಲ ಏನಿಲ್ಲ. ಅವನಿಗೆ ಯೋಗ್ಯತೆಯೇ ಇಲ್ಲ ಮಾತನಾಡುವುದಕ್ಕೆ. ಅವನ್ನ ನಾನು ನೋಡಿಲ್ಲ. ಅವನು ಯಾರು ಗೊತ್ತಿಲ್ಲ. ಚಪಲವಾದ ಬಾಯಿ ಏನಾದ್ರೂ ಹೊದರಬೇಕು ಹೊದರಿರ್ತಾನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment