ಸುದ್ದಿಒನ್, ಚಿತ್ರದುರ್ಗ, ಆ.25 : ಚಂದ್ರಯಾನ-3 ಯಶಸ್ವಿ ಯೋಜನೆಯ ವಿಜ್ಞಾನಿಗಳ ತಂಡದಲ್ಲಿ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಡಾ.ರಮೇಶ್ ವಿ ನಾಯ್ಡು, ಹಾಗೂ ಮಲ್ಲಿಕಾರ್ಜುನ್ ಇದ್ದಾರೆ.
ಡಾ.ರಮೇಶ್ ವಿ ನಾಯ್ಡು 1987-1991ರ ಸಾಲಿನ ವಿದ್ಯಾರ್ಥಿಯಾಗಿದ್ದು, ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ 1991ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ 5ನೇ ರ‌್ಯಾಂಕ್ ಪಡೆದಿದ್ದರು. ಮಲ್ಲಿಕಾರ್ಜುನ್ 1996-2000ನೇ ಸಾಲಿನಲ್ಲಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದರು.
ಈ ಇಬ್ಬರು ಹೆಮ್ಮೆಯ ವಿಜ್ಞಾನಿಗಳನ್ನು ಎಸ್‍ಜೆಎಂ ವಿದ್ಯಾಪೀಠ ಆಡಳಿತಮಂಡಳಿ, ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಭರತ್ ಪಿ ಬಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






