ಬಿವೈ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಬದಲಾವಣೆ..!

1 Min Read

 

 

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದು ಬಿಜೆಪಿಯಲ್ಲಿ ಸಾಕಷ್ಟು ಜನರಿಗೆ ಸಂತಸ, ಸಂಭ್ರಮವಿದ್ದರೆ ಇನ್ನು ಕೆಲವರಿಗೆ ಅಸಮಾಧಾನವಿದೆ. ಇದರ ನಡುವೆ ಬಿವೈ ವಿಜಯೇಂದ್ರ ಅವರ ಪದಗ್ರಹಣಕ್ಕೆ‌ ನಿಗಧಿಯಾಗಿದ್ದ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆಯಾಗಿದೆ.

ವಿಜಯೇಂದ್ರ ಅವರು ಇದೇ ತಿಂಗಳ 15 ರಾಜ್ಯಾಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿ, ಬಳಿಕ ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಆದರೆ ಇದೀಗ ಆ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಿದೆ. ನವೆಂಬರ್ 15 ರಂದು ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸಮಾರಂಭ ನಡೆಯಲಿದೆ.

ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 16 ರಂದು ನಿಗಧಿಯಾಹಿದ್ದ ಬೃಹತ್ ಕಾರ್ಯಕ್ರಮ ಮುಂದೂಡಲಾಗಿದೆ. ನವೆಂಬರ್ 23ರ ನಂತರ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲು ಬಿಜೆಪಿ ಪ್ಲಾನ್ ಮಾಡಿದೆ. ಈಗ ಸಮಾವೇಶ ಮಾಡಿದರೆ ಕೇಂದ್ರದ ನಾಯಕರು ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಈಗ ಸಮಾವೇಶ ಮಾಡಿದರೆ ಕೇಂದ್ರದ ನಾಯಕರು ಬರುವುದಿಲ್ಲ ಎಂಬ ಕಾರಣಕ್ಕಾಗಿ ಬೃಹತ್ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *