Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶನಿವಾರ ಶಾಲೆಗಳ ಸಮಯದಲ್ಲಿ ಬದಲಾವಣೆ; ಶಿಕ್ಷಣ ಇಲಾಖೆಯಿಂದ ಹೊಸ ಆದೇಶ

---Advertisement---

ರಾಜ್ಯದ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಅನುಕೂಲವಾಗುವಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಶನಿವಾರದ ತರಗತಿಗಳಿಗೆ ಏಕರೂಪ ಸಮಯ ನಿಗದಿಪಡಿಸಲಾಗಿದೆ.ಹೊಸ ಮಾರ್ಗಸೂಚಿಯ ಪ್ರಕಾರ, ಶನಿವಾರದಂದು ಶಾಲೆಗಳು ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಈ ಮೂಲಕ ರಾಜ್ಯದಾದ್ಯಂತ ಎಲ್ಲ ಶಾಲೆಗಳಲ್ಲಿ ಒಂದೇ ವೇಳಾಪಟ್ಟಿಯನ್ನು ಅನುಸರಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಇಲ್ಲಿಯವರೆಗೆ ವಿವಿಧ ಜಿಲ್ಲೆಗಳು ಮತ್ತು ಶಾಲೆಗಳಲ್ಲಿ ಶನಿವಾರದ ತರಗತಿಗಳು ಬೇರೆ ಬೇರೆ ಸಮಯಗಳಲ್ಲಿ ನಡೆಯುತ್ತಿದ್ದವು. ಕೆಲವೆಡೆ ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ತರಗತಿಗಳಿದ್ದರೆ, ಇನ್ನೂ ಕೆಲವು ಶಾಲೆಗಳಲ್ಲಿ 7.30ರಿಂದ 11.30ರವರೆಗೆ ಶಾಲಾ ಅವಧಿ ನಿಗದಿಯಾಗಿತ್ತು. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಉಂಟಾಗುತ್ತಿತ್ತು.ಹೊಸ ವೇಳಾಪಟ್ಟಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏಕರೂಪ ವ್ಯವಸ್ಥೆ ಜಾರಿಯಾಗಲಿದ್ದು, ಪೋಷಕರಿಗೂ ಸಮಯ ನಿರ್ವಹಣೆ ಸುಲಭವಾಗಲಿದೆ. ಜೊತೆಗೆ ವಿದ್ಯಾರ್ಥಿಗಳು ಅತಿ ಮುಂಜಾನೆ ಶಾಲೆಗೆ ತೆರಳಬೇಕಾದ ಅನಿವಾರ್ಯತೆಯೂ ಕಡಿಮೆಯಾಗಲಿದೆ.

ಶಿಕ್ಷಕರಿಗೂ ಈ ಕ್ರಮದಿಂದ ಅನುಕೂಲವಾಗಲಿದ್ದು, ಸರ್ಕಾರ ಕಡ್ಡಾಯಗೊಳಿಸಿರುವ ಆನ್‌ಲೈನ್ ಹಾಜರಾತಿ ವ್ಯವಸ್ಥೆಯನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ಶನಿವಾರದ ಶಾಲಾ ಅವಧಿಗೆ ಮಾತ್ರ ಈ ಬದಲಾವಣೆ ಅನ್ವಯವಾಗಲಿದ್ದು, ಉಳಿದ ದಿನಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now