Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ : ಹೈಕಮಾಂಡ್ ನಾಯಕರು ತೆಗೆದುಕೊಂಡ ನಿರ್ಧಾರವೇನು..!

---Advertisement---

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಚರ್ಚೆ ಇದೀಗ ದೆಹಲಿಯ ಅಂಗಳ ತಲುಪಿದೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆಗಾಗಿ ಪಟ್ಟು ಹಿಡಿದಿರುವ ಬಗ್ಗೆಯೂ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ಬಂದಿದೆ. ಇದೇ ಸಂದರ್ಭದಲ್ಲಿಯೇ ಸಚಿವರ ಪಟ್ಟು ಹಿಡಿದ ವಿಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಕ ಉತ್ತರ ನೀಡಿದ್ದಾರೆ.

ಲೋಕಸಭಾ ಚುನಾವಣೆ ಮುಗಿದ ತಕ್ಷಣ ಇದನ್ನು ಮಂಡಿಸಬೇಕಿತ್ತು. ಬೇರೆ ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆ ಬದಲಾವಣೆ ಕಷ್ಟವಾಗುತ್ತದೆ. ನವೆಂಬರ್ ತನಕ ಯಾವುದೇ ರೀತಿಯ ಬದಲಾವಣೆಗಳು ಬೇಡ ಎಂದೇ ಹೇಳಿದ್ದಾರೆ ಎನ್ನಲಾಗಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೂ ಯಾವುದೇ ಬದಲಾವಣೆ ಇಲ್ಲ ಎಂಬುದನ್ನೇ ಸಾರಿದಂತೆ ಆಗಿದೆ. ಸರ್ಕಾರ ರಚನೆಯಾದ ಮೇಲೆ ಒಂದೇ ಡಿಸಿಎಂ ಹುದ್ದೆ ಇರಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬದಲಾವಣೆಯಾಗಬಾರದು ಎಂದೇ ಡಿಕೆ ಶಿವಕುಮಾರ್ ಹೇಳಿದ್ದರು ಎಂಬುದಾಗಿಯೇ ಚರ್ಚೆಗಳಾಗ್ತಾ ಇತ್ತು. ಈಗಲೂ ಯಾವುದೇ ಬದಲಾವಣೆಯನ್ನು ಮಾಡಲು ಹೈಕಮಾಂಡ್ ಒಪ್ಪಿಲ್ಲ ಎಂದೇ ಹೇಳಲಾಗ್ತಾ ಇದೆ.

ಈ ಬಗ್ಗೆ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ಡಿಕೆ ಶಿವಕುಮಾರ್ ಅವರಿಗೆ ಬಲಾಬಲ ಪ್ರದರ್ಶನ ಮಾಡುವ ಅಗತ್ಯವಿಲ್ಲ. ಪ್ರಾಮಾಣಿಕವಾಗಿ ಪಕ್ಷವನ್ನು ಮುನ್ಮಡೆಸುತ್ತಿದ್ದಾರೆ. ಯಾವುದೇ ಶಾಸಕರ ಬೆಂಬಲವನ್ನು ಕೇಳುವ ಸಮಯ ಇಲ್ಲ ಅಂತ ಉತ್ತರ ನೀಡಿದ್ದಾರೆ. ರಾಜ್ಯದ ಬೆಳವಣಿಗೆಯ ನಡುವೆ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿರುವುದನ್ನು ಕುರಿತು ವಿರೋಧ ಪಕ್ಷಗಳು ವ್ಯಂಗ್ಯವಾಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment