Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 20ರಂದು ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

---Advertisement---

ನೈರುತ್ಯ ರೈಲ್ವೆಯು ಹಿರೇಹಳ್ಳಿ ಯಾರ್ಡ್‌ನಲ್ಲಿ ಸುರಕ್ಷತೆ ಮತ್ತು ಸಿಗ್ನಲ್ ಸಂಬಂಧಿತ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಮೇ 20ರಂದು ಹಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಿಸಿದೆ.

ಮೇ 20ರಂದು ಯಶವಂತಪುರ-ಶಿವಮೊಗ್ಗ ಟೌನ್ ದೈನಂದಿನ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (20689) ರೈಲು ಪರಿಷ್ಕೃತ ಮಾರ್ಗದಲ್ಲಿ ಸಂಚರಿಸಲಿದೆ. ಈ ರೈಲು ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಹಾಸನ ಹಾಗೂ ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ತುಮಕೂರು ಮತ್ತು ತಿಪಟೂರು ಮಾರ್ಗದಲ್ಲಿ ಸಂಚಾರ ಇರುವುದಿಲ್ಲ.

ಇದೇ ರೀತಿ ಮೈಸೂರು-ಬೆಳಗಾವಿ ವಿಶ್ವಮಾನವ ದೈನಂದಿನ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (20676) ರೈಲಿನ ಮಾರ್ಗದಲ್ಲೂ ಬದಲಾವಣೆ ಮಾಡಲಾಗಿದೆ. ಈ ರೈಲು ಮೈಸೂರು, ಹೊಳೆನರಸೀಪುರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಪರಿಣಾಮವಾಗಿ ಪಾಂಡವಪುರ, ಬೆಂಗಳೂರು, ತುಮಕೂರು ಹಾಗೂ ತಿಪಟೂರು ಮಾರ್ಗದಲ್ಲಿ ಈ ರೈಲು ಸಂಚಾರ ನಡೆಸುವುದಿಲ್ಲ.

ಮೇ 20ರಂದು ಕೆಎಸ್‌ಆರ್ ಬೆಂಗಳೂರು-ತುಮಕೂರು ಮೆಮು ರೈಲು (66567) ದೊಡ್ಡಬೆಲೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ದೊಡ್ಡಬೆಲೆ ಮತ್ತು ತುಮಕೂರು ನಡುವಿನ ಸೇವೆ ರದ್ದುಗೊಂಡಿದೆ.
ಅದೇ ದಿನ ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ರೈಲು (66572) ದೊಡ್ಡಬೆಲೆ ನಿಲ್ದಾಣದಿಂದಲೇ ಸಂಚಾರ ಆರಂಭಿಸಲಿದ್ದು, ತುಮಕೂರು-ದೊಡ್ಡಬೆಲೆ ನಡುವಿನ ಸೇವೆ ಇರುವುದಿಲ್ಲ.

ಮೇ 19ರಂದು ವೇಲಂಕಣಿಯಿಂದ ಹೊರಡುವ ವೇಲಂಕಣಿ-ವಾಸ್ಕೊಡಗಾಮ ಸಾಪ್ತಾಹಿಕ ಎಕ್ಸ್‌ಪ್ರೆಸ್ (17316) ರೈಲು ಮಾರ್ಗ ಮಧ್ಯೆ ಸುಮಾರು 60 ನಿಮಿಷಗಳ ಕಾಲ ವಿಳಂಬವಾಗಿ ಸಂಚರಿಸಲಿದೆ.
ಇನ್ನೂ ಮೇ 20ರಂದು ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (12725) ಹಾಗೂ ಯಶವಂತಪುರ-ಹಜರತ್ ನಿಜಾಮುದ್ದೀನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (12649) ರೈಲುಗಳು ತಲಾ 30 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now