Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚನ್ನಗಿರಿ ಶಾಸಕ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು..!

---Advertisement---

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಜೊತೆಗೆ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಫೆಬ್ರವರಿ 17ರಂದೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಉಪ್ಪಾರಪೇಟೆಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಮೃತ ವ್ಯಕ್ತಿ.

ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯವರು. ಈ ಹಿಂದೆ ಚನ್ನಗಿರಿ ಶಾಸಜ ಬಸವರಾಜ್ ಶಿವಗಂಗಾ ಅವರ ಬಳಿಯೇ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದವರು. ಆದರೆ ಇರೋ ಬರೋ ಕಡೆಯಲ್ಲೆಲ್ಲಾ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶಾಸಕರ ಬಳಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಕೆಲಸವನ್ನು ಕಳೆದುಕೊಂಡಿದ್ದರು. ಸ್ವಲ್ಪ ದಿನಗಳ ಹಿಂದಷ್ಟೇ ಪಿಎ ಆಗಿ ಕೆಲಸ ಬಿಟ್ಟಿದ್ದರಂತೆ. ಇದರ ನಡುವೆ ಅವರ ಹೆಂಡತಿಗೆ ಪ್ರತಿದಿನ ವಿಡಿಯೋ ಕಾಲ್ ಮಾಡುತ್ತಿದ್ದರಂತೆ. ನನಗೆ ಜೀವನ ಸಾಕಾಗಿದೆ ಎಂಬ ಮಾತನ್ನ ಹೇಳುತ್ತಿದ್ದರಂತೆ. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...