Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚನ್ನಪಟ್ಟಣ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದು, ಡಿಕೆಶಿ ಭೇಟಿ ಮಾಡಿದ ಸಿಪಿ ಯೋಗೀಶ್ವರ್..!

---Advertisement---

ಬೆಂಗಳೂರು: ಉಪಚುನಾವಣೆಯ ರಾಜಕೀಯ ಅಖಾಡ ರಂಗೇರಿದೆ‌. ಜೆಡಿಎಸ್ ಹಾಗೂ ಬಿಜೆಪಿಗೆ ಸಿಪಿ ಯೋಗೀಶ್ವರ್ ಶಾಕ್ ನೀಡಿದ್ದಾರೆ. ಮೈತ್ರಿ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದ್ದರು ಸಹ ಜೆಡಿಎಸ್ ಚಿಹ್ನೆ ಹಿಡಿಯಲು ಒಪ್ಪಿರಲಿಲ್ಲ. ಹೀಗಾಗಿ ನಿನ್ನೆ ಸಂಜೆಯ ತನಕವೂ ಬಿಜೆಪಿಗೆ ಸಮಯ ನೀಡಿದ್ದರು. ಏನು ಬದಲಾಗದ ಕಾರಣ ಸೀದಾ ಕಾರು ಹತ್ತಿ, ಬೆಳಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಮನೆಯ ಕದ ತಟ್ಟಿದರು.

ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದ ಯೋಗೀಶ್ವರ್, ಈಗ ದಿಢೀರನೇ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾದ್ರೆ ಸಿಪಿ ಯೋಗೀಶ್ವರ್ ಕಾಂಗ್ರೆಸ್ ಸೇರುವುದು ಪಕ್ಕಾ ಎಂಬಂತೆ ಆಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ಡಿಕೆ ಬ್ರದರ್ಸ್, ಕಾಂಗ್ರೆಸ್ ನ ಹಲವು ನಾಯಕರು, ಸಿಪಿ ಯೋಗೀಶ್ವರ್ ನೇರವಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ.

ಈ ವೇಳೆ ಸಿಪಿ ಯೋಗೀಶ್ವರ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ‌. ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದಂತ ಬೆಳವಣಿಗೆಯಾಗಿದೆ. ಸಿಪಿ ಯೋಗೀಶ್ವರ್ ಬಿಜೆಪಿ ಪಕ್ಷದಿಂದ ಟಿಕೆಟ್ ಗಾಗಿ ಕಾಯುತ್ತಿದ್ದರು. ಆದರೆ ಬಿಜೆಪಿ ಚನ್ನಪಟ್ಟಣದ ಎಲ್ಲಾ ನಿರ್ಧಾರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟಿತ್ತು. ಇದರ ಪರಿಣಾಮ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದ ಯೋಗೀಶ್ವರ್ ಅವರಿಗೆ ನಿರಾಸೆ ಉಂಟಾಗಿತ್ತು. ಇದೀಗ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ನಿಂದ ಚನ್ನಪಟ್ಟಣಕ್ಕೆ ಯಾರೂ ನಿಲ್ಲುತ್ತಾರೆ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಇದರ ನಡುವೆ ಸಿಪಿ ಯೋಗೀಶ್ವರ್ ಗೆ ಕೊಡಬಹುದು ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment